ಬೆಳಗಾವಿ: ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಬರೊಬ್ಬರಿ 1 ಕೋಟಿ ರೂ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿಯ ಬಳಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡ ಪ್ರಮಾಣದ ನಕಲಿ ಕರೆನ್ಸಿ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, 1 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಮಿರಾಜ್‌ನ ಗಾಂಧಿ ಚೌಕ್ ಪೊಲೀಸ್ ಠಾಣೆಯ ವಿಶೇಷ ಪೊಲೀಸ್ ತಂಡವು ಬೆಳಗಾವಿ ತಾಲ್ಲೂಕಿನ ಕಾಗವಾಡದಿಂದ ಸುಮಾರು 15 ಕಿ.ಮೀ ದೂರದಲ್ಲಿ ಮಹಾರಾಷ್ಟ್ರ ಸರಹದ್ದಿನಲ್ಲಿ 500 ರೂ ಮುಖಬೆಲೆಯ ನಕಲಿ ನೋಟುಗಳನ್ನು ಈ ತಂಡ ಸಾಗಣೆ ಮಾಡುತ್ತಿತ್ತು.
ಈ ವೇಳೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ನಕಲಿ ನೋಟುಗಳನ್ನು ಮುದ್ರಿಸುವ ಮತ್ತು ಚಲಾವಣೆ ಮಾಡುವಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ತಂಡ ಬಂಧಿಸಿದೆ.
ಬಂಧಿತರಲ್ಲಿ ಮಹಾರಾಷ್ಟ್ರದ ಮೊಬೈಲ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುವ ಚಾಲಕನೂ ಸೇರಿದ್ದಾನೆ ಎಂದು ಮೂಲಗಳು ತಿಳಿಸಿವೆ. ದಾಳಿಯ ಸಮಯದಲ್ಲಿ ಪೊಲೀಸರು ಒಂದು ಕಾರು, ಮುದ್ರಣ ಯಂತ್ರಗಳು, ವಿಶೇಷ ಕಾಗದ ಮತ್ತು ನಕಲಿ ಕರೆನ್ಸಿ ಮುದ್ರಿಸಲು ಬಳಸುವ ಇತರ ಉಪಕರಣಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.
ಅಲ್ಲದೆ ನಕಲಿ ಕರೆನ್ಸಿ ವ್ಯಾಪಾರದಲ್ಲಿ ಭಾಗಿಯಾಗಿರುವ ವ್ಯಾಪಕ ಜಾಲವನ್ನು ಪತ್ತೆಹಚ್ಚಲು ತನಿಖೆ ಈಗ ಸಾಂಗ್ಲಿ, ಕೊಲ್ಹಾಪುರ ಮತ್ತು ಬೆಳಗಾವಿ ಜಿಲ್ಲೆಗಳ ಗಡಿ ಪ್ರದೇಶಗಳಲ್ಲಿ ವಿಸ್ತರಿಸಿದೆ. ಜಾಲದ ಗಡಿಯಾಚೆಗಿನ ಸಂಪರ್ಕಗಳು ಮತ್ತು ವಿತರಣಾ ಮಾರ್ಗಗಳ ಬಗ್ಗೆ ತನಿಖೆ ಮುಂದುವರೆದಂತೆ ಹೆಚ್ಚಿನ ಬಂಧನಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.