ದೇಶ

5 ಕೋಟಿ ರೂ ಹಣ, ಐಷಾರಾಮಿ ಕಾರು, 1.5 ಕೆಜಿ ಆಭರಣ, 22 ವಾಚು: ಭ್ರಷ್ಟ IPS ಅಧಿಕಾರಿ ಬಂಧನ

ಹರ್‌ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಪಂಜಾಬ್‌ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ.

ಚಂಡೀಗಡ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಪಂಜಾಬ್‌ನ ರೋಪರ್ ವಲಯ ಡಿಐಜಿ ಹರ್‌ಚರಣ್ ಸಿಂಗ್ ಬುಲ್ಲಾರ್​ರನ್ನು ಸಿಬಿಐ ಗುರುವಾರ ಬಂಧಿಸಿದೆ.

ಸಿಬಿಐ ಅಧಿಕಾರಿಗಳು ಭ್ರಷ್ಟಾಚಾರ ಕೇಸ್​ನಲ್ಲಿ ಐಪಿಎಸ್​ ಅಧಿಕಾರಿ ಹರ್ಚರಣ್ ಸಿಂಗ್ ಭುಲ್ಲರ್ ಮನೆ ಮೇಲೆ ದಾಳಿ ನಡೆಸಿದಾಗ ಬರೋಬ್ಬರಿ 5 ಕೋಟಿ ರು. ನಗದು, ಐಷಾರಾಮಿ ವಾಹನಗಳು, 1.5 ಕೆ.ಜಿ. ಆಭರಣಗಳು, 22 ಐಷಾರಾಮಿ ಕೈಗಡಿಯಾರಗಳು, ಆಮದು ಮದ್ಯ ಮತ್ತು ಆಯುಧಗಳಂತಹ ಬೃಹತ್ ಸಂಪತ್ತುಗಳು ಪತ್ತೆಯಾಗಿವೆ. ಈ ಘಟನೆಯು ಪಂಜಾಬ್ ಪೊಲೀಸ್ ಇಲಾಖೆಯಲ್ಲಿ ಭ್ರಷ್ಟಾಚಾರದ ಬಗ್ಗೆ ಚರ್ಚೆಗೆ ಕಾರಣವಾಗಿದ್ದು, ಸಿಬಿಐ ತೀವ್ರ ತನಿಖೆಗೆ ಕೈಹಾಕಿದೆ.

ಹರ್‌ಚರಣ್ ಸಿಂಗ್ ಬುಲ್ಲಾರ್ 2009ರ ಬ್ಯಾಚ್‌ನ ಐಪಿಎಸ್ ಅಧಿಕಾರಿ. ಪಂಜಾಬ್‌ನ ರೋಪರ್ ವಲಯದಲ್ಲಿ ಡಿಐಜಿಯಾಗಿದ್ದಾರೆ. 8 ಲಕ್ಷ ರೂಪಾಯಿ ಲಂಚ ಪಡೆದ ಆರೋಪದಲ್ಲಿ ಸಿಬಿಐಗೆ ಬಲೆಗೆಬಿದ್ದಿದ್ದಾರೆ. ಇವರ ಜೊತೆ ಮಧ್ಯವರ್ತಿ ಕೃಷ್ಣ ಎಂಬಾತನನ್ನು ಬಂಧಿಸಲಾಗಿದೆ. ಆಕಾಶ್ ಬಟ್ಟಾ ಎಂಬ ಸ್ಕ್ರ್ಯಾಪ್ ವ್ಯಾಪಾರಿ ವಿರುದ್ಧ ಕ್ರಿಮಿನಲ್ ಕೇಸ್ ಇತ್ಯರ್ಥಕ್ಕೆ ಮಧ್ಯವರ್ತಿ ಮೂಲಕ ಲಂಚ ಪಡೆಯುವ ವೇಳೆ ಲಾಕ್ ಆಗಿದ್ದಾರೆ.

8 ಲಕ್ಷ ರೂ. ಲಂಚ ಕೊಡದಿದ್ದರೆ ಕ್ರಿಮಿನಲ್ ಕೇಸ್ ಜೊತೆ ಉದ್ಯಮಕ್ಕೆ ತೊಂದರೆ ಎದುರಿಸಬೇಕಾಗುತ್ತದೆ ಎಂದು ಡಿಐಜಿ ಬೆದರಿಸಿದ್ದರು. ಈ ಬಗ್ಗೆ ಉದ್ಯಮಿ ಆಕಾಶ್ ಸಿಬಿಐಗೆ ದೂರು ಸಲ್ಲಿಸಿದ್ದರು. ದೂರಿನ ಆಧಾರದಲ್ಲಿ ಅಖಾಡಕ್ಕಿಳಿದ ಸಿಬಿಐ ಅಧಿಕಾರಿಗಳು, ಲಂಚ ಪಡೆಯುವ ವೇಳೆ ರೆಡ್‌ಹ್ಯಾಂಡಾಗಿ ಡಿಐಜಿ ಹರ್‌ಚರಣ್‌ರನ್ನು ಬಂಧಿಸಿದೆ.

5 ಕೋಟಿ ರೂಪಾಯಿಗೂ ಹೆಚ್ಚು ನಗದು ಸಿಕ್ಕಿದೆ. ಇದಲ್ಲದೆ 1.5 ಕೆಜಿ ಚಿನ್ನಾಭರಣ, ನೂರಾರು ಕೋಟಿ ರೂ. ಮೌಲ್ಯದ ನಿವೇಶನ-ಜಮೀನಿನ ದಾಖಲೆಪತ್ರಗಳು, ಐಷಾರಾಮಿ ಮರ್ಸಿಡಿಸ್, ಆಡಿ ಕಾರ್‌ನ ಕೀಗಳು, 22 ದುಬಾರಿ ಬೆಲೆಯ ವಾಚ್‌ಗಳು, 40 ಲೀಟರ್‌ ಇಂಪೋರ್ಟೆಡ್ ಮದ್ಯ, ಡಬಲ್ ಬ್ಯಾರಲ್ ಶಾಟ್‌ಗನ್, ಒಂದು ಪಿಸ್ತೂಲ್, ಒಂದು ರಿವಾಲ್ವರ್ ಮತ್ತು 1 ಏರ್‌ಗನ್ ಅನ್ನು ಸಿಬಿಐ ವಶಕ್ಕೆ ಪಡೆದಿದೆ.

ಇದಲ್ಲದೆ ಲಂಚದ ಡೀಲ್ ಕುದುರುಸಿದ್ದ ಮಧ್ಯವರ್ತಿ ಕೃಷ್ಣ ಎಂಬಾತನಿಂದ 21 ಲಕ್ಷ ರೂಪಾಯಿ ಜಪ್ತಿ ಮಾಡಲಾಗಿದೆ. ಡಿಜಿಐ ಮನೆಯಲ್ಲಿ ರಾತ್ರಿಯಿಡೀ ಶೋಧ ಮುಂದುವರಿದಿದ್ದು, ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸನಾತನಿಗಳ ಸಹವಾಸದಿಂದ ದೂರ ಇರಿ; RSS, ಸಂಘ ಪರಿವಾರದ ಬಗ್ಗೆ ಜಾಗರೂಕರಾಗಿರಿ: ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ

ಕಲಬುರಗಿ: ಚಿತ್ತಾಪುರದಲ್ಲಿ RSS ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್, ಭಗವಾಧ್ವಜ ತೆರವು; BJP ಕಿಡಿ

ಬೆಂಗಳೂರು: 8 ದಿನಗಳಿಂದ ಪ್ರೇಯಸಿ ಜತೆ ಖಾಸಗಿ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ನಿಗೂಢ ಸಾವು, Girlfriend ಎಸ್ಕೇಪ್!

ಜಾರ್ಖಂಡ್: ಮಿತಿ ಮೀರಬೇಡಿ; ನ್ಯಾಯಾಂಗದ ಬಗ್ಗೆ ದೇಶ ಹೊತ್ತಿ ಉರೀತಿದೆ: ಹೈಕೋರ್ಟ್ ಜಡ್ಜ್ ಗೇ ಝಾಡಿಸಿದ ವಕೀಲ!

ಶಾಂತಿಯೋ? ಪ್ರಕ್ಷುಬ್ಧತೆಯೋ?: ತಾಲಿಬಾನ್ ಗೆ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಕೊಟ್ಟ ವಾರ್ನಿಂಗ್ ಏನು?

SCROLL FOR NEXT