ರೈಲು ಸಾಂದರ್ಭಿಕ ಚಿತ್ರ 
ದೇಶ

ಚಲಿಸುವ ರೈಲಿನಲ್ಲಿ ಮಗುವಿಗೆ CPR ಮಾಡಿ ಜೀವ ಉಳಿಸಿದ ಸೇನಾ ಸಿಬ್ಬಂದಿ!

"ತಕ್ಷಣದ ವೈದ್ಯಕೀಯ ನೆರವು ಲಭ್ಯವಿಲ್ಲದ ಪರಿಸ್ಥಿತಿಯಲ್ಲಿ ಅವರ ಸಕಾಲಿಕ ಮತ್ತು ವೃತ್ತಿಪರ ಕ್ರಮವು ಮಗುವಿನ ಜೀವ ಉಳಿಸಿತು" ಎಂದು ರಕ್ಷಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವದೆಹಲಿ: ರಜೆಯಿಂದ ಕರ್ತವ್ಯಕ್ಕೆ ಮರಳುತ್ತಿದ್ದ ಭಾರತೀಯ ಸೇನೆಯ ಆಂಬ್ಯುಲೆನ್ಸ್ ಸಹಾಯಕರೊಬ್ಬರು ರೈಲಿನಲ್ಲಿ ಎಂಟು ತಿಂಗಳ ಶಿಶುವಿಗೆ ಬಾಯಿಯಿಂದ ಬಾಯಿಗೆ ರೆಸಸಿಟೇಶನ್ ನಡೆಸಿ ಜೀವ ಉಳಿಸಿದ್ದಾರೆ ಎಂದು ರಕ್ಷಣಾ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಈಶಾನ್ಯದಲ್ಲಿರುವ ಸೇನೆಯ ಫೀಲ್ಡ್ ಆಸ್ಪತ್ರೆಯಲ್ಲಿ ನಿಯೋಜಿತರಾಗಿರುವ ಸಿಪಾಯಿ ಸುನಿಲ್, ನವದೆಹಲಿ-ದಿಬ್ರುಗಢ ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅದೇ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಗುವಿಗೆ ಕಾರ್ಡಿಯೋ-ಪಲ್ಮನರಿ ರೆಸಸಿಟೇಶನ್(ಸಿಪಿಆರ್) ಮಾಡಿ ಮಗುವಿನ ಜೀವ ಉಳಿಸಿದರು ಎಂದು ಅವರು ಹೇಳಿದ್ದಾರೆ.

"ತಕ್ಷಣದ ವೈದ್ಯಕೀಯ ನೆರವು ಲಭ್ಯವಿಲ್ಲದ ಪರಿಸ್ಥಿತಿಯಲ್ಲಿ ಅವರ ಸಕಾಲಿಕ ಮತ್ತು ವೃತ್ತಿಪರ ಕ್ರಮವು ಮಗುವಿನ ಜೀವ ಉಳಿಸಿತು" ಎಂದು ರಕ್ಷಣಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಾರದ ಆರಂಭದಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಎಂಟು ತಿಂಗಳ ಶಿಶುವಿಗೆ ಹಠಾತ್ ಉಸಿರಾಟದ ತೊಂದರೆ ಉಂಟಾಗಿ ಪ್ರತಿಕ್ರಿಯಿಸಲು ಸಾಧ್ಯವಾಗಲಿಲ್ಲ. ಮಗು ಮೃತಪಟ್ಟಿದೆ ಎಂದು ಭಾವಿಸಿ ಮಗುವಿನ ತಾಯಿ ಮೂರ್ಛೆ ಹೋದರು. ಅಲ್ಲದೆ ಇತರ ಕುಟುಂಬ ಸದಸ್ಯರು ಭಯಭೀತರಾಗಿದ್ದರು. ಆದರೆ ಅದೇ ಬೋಗಿಯಲ್ಲಿದ್ದ 456 ಫೀಲ್ಡ್ ಆಸ್ಪತ್ರೆಯಲ್ಲಿ ನಿಯೋಜಿತರಾಗಿರುವ ಸಿಪಾಯಿ(ಆಂಬ್ಯುಲೆನ್ಸ್ ಸಹಾಯಕ) ಸುನಿಲ್ ಅವರು ತಕ್ಷಣ ಅವರ ಸಹಾಯಕ್ಕೆ ಧಾವಿಸಿದರು ಮತ್ತು ಮಗುವನ್ನು ಪರೀಕ್ಷಿಸಿದರು ಎಂದು ರಕ್ಷಣಾ ಅಧಿಕಾರಿ ತಿಳಿಸಿದ್ದಾರೆ.

"ಸುನಿಲ್ ತಕ್ಷಣವೇ ಎದೆಯ ಮೇಲೆ ಎರಡು ಬೆರಳುಗಳನ್ನು ಬಳಸಿ ಮಕ್ಕಳ ಹೃದಯ-ಶ್ವಾಸಕೋಶದ ರೆಸಸಿಟೇಶನ್ ಮಾಡಿದರು ಮತ್ತು ಮಗುವಿಗೆ ಬಾಯಿಯಿಂದ ಬಾಯಿಗೆ ಉಸಿರಾಟವನ್ನು ನೀಡಿದರು. ಮಾರು ಎರಡು ಬಾರಿ CPR ಮಾಡಿದ ನಂತರ ಮಗು ಎಚ್ಚರಗೊಂಡಿತು" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸರ್ಕಾರಿ ಜಾಗದಲ್ಲಿ ಸಂಘಗಳ ಚಟುವಟಿಕೆಗೆ ಇಂದಿನಿಂದಲೇ ಅನುಮತಿ ಕಡ್ಡಾಯ: ರಾಜ್ಯ ಸರ್ಕಾರ ಅಧಿಕೃತ ಆದೇಶ

'ಒಂದು ಸಣ್ಣ ಪ್ರಚೋದನೆ ಭಾರತದ ಭೂಪಟವೇ ಬದಲಾಗಬಹುದು': ಮತ್ತೆ ಪರಮಾಣು ಧಮ್ಕಿ ಹಾಕಿದ ಪಾಕ್ ಸೇನಾ ಮುಖ್ಯಸ್ಥ

ಢಾಕಾದಲ್ಲಿ ಭಾರತೀಯ ಸೇನಾ ಗುಪ್ತಚರ ಅಧಿಕಾರಿಗಳು: ಹಳೆಯ ಸೇನಾ ವಿಮಾನ ನಿಲ್ದಾಣಕ್ಕೆ ಬಾಂಗ್ಲಾ ಸೇನಾ ಮುಖ್ಯಸ್ಥ ಭೇಟಿ; ಸಭೆ!

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ ವೇತನ ಕಟ್; ಶೇ.10-15 ರಷ್ಟು ತಂದೆ-ತಾಯಿ ಖಾತೆಗೆ!

ಅಮೆರಿಕ-ಭಾರತ ವ್ಯಾಪಾರ ಮಾತುಕತೆ: 'ಪ್ರಗತಿ ಕಂಡುಬಂದಿದೆ, ಯಾವುದೇ ಪ್ರಮುಖ ವ್ಯತ್ಯಾಸಗಳಿಲ್ಲ'; ವಾಣಿಜ್ಯ ಸಚಿವಾಲಯ

SCROLL FOR NEXT