ಚಿರಾಗ್ ಪಾಸ್ವಾನ್ online desk
ದೇಶ

ಸೀಟು ಹಂಚಿಕೆಯಲ್ಲಿ 'ದೊಡ್ಡ ಹೃದಯ' ತೋರಿದ ಬಿಜೆಪಿ, ಜೆಡಿ(ಯು)ಗೆ ಚಿರಾಗ್ ಪಾಸ್ವಾನ್ ಧನ್ಯವಾದ

ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ಕ್ಷೇತ್ರಗಳನ್ನು ಭದ್ರಪಡಿಸಿಕೊಳ್ಳುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಚಿರಾಗ್ ಪಾಸ್ವಾನ್ ಅವರು ಇಂದು ಪಾಟ್ನಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ತಮ್ಮ ಎಲ್‌ಜೆಪಿ(ರಾಮ್ ವಿಲಾಸ್) ಸೇರಿದಂತೆ ಸಣ್ಣ ಎನ್‌ಡಿಎ ಪಾಲುದಾರರಿಗೆ ಅವಕಾಶ ನೀಡುವಲ್ಲಿ "ದೊಡ್ಡ ಹೃದಯ" ತೋರಿಸಿದ್ದಕ್ಕಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿ(ಯು) ಮತ್ತು ಬಿಜೆಪಿಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶನಿವಾರ ಧನ್ಯವಾದ ಅರ್ಪಿಸಿದ್ದಾರೆ.

ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಮುಖ ಕ್ಷೇತ್ರಗಳನ್ನು ಭದ್ರಪಡಿಸಿಕೊಳ್ಳುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಚಿರಾಗ್ ಪಾಸ್ವಾನ್ ಅವರು ಇಂದು ಪಾಟ್ನಾದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದರು.

ಬಳಿಕ ಮಾತನಾಡಿದ ಪಾಸ್ವಾನ್ ಅವರು, ಎನ್‌ಡಿಎ "ಐತಿಹಾಸಿಕ ಗೆಲುವು" ಸಾಧಿಸುತ್ತದೆ ಎಂದು ಪ್ರತಿಪಾದಿಸಿದರು.

ಆಂತರಿಕ ಘರ್ಷಣೆಗಳಿಂದ ಬಳಲುತ್ತಿರುವ ಇಂಡಿಯಾ ಒಕ್ಕೂಟವು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಜನರು ಅಂತಹ ನಾಯಕತ್ವವನ್ನು ಒಪ್ಪುವುದಿಲ್ಲ ಎಂದು ಎಚ್ಚರಿಸಿದರು.

"ತೇಜಸ್ವಿ ಯಾದವ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಮೈತ್ರಿಕೂಟವೇ ಬಹಿರಂಗವಾಗಿ ಹೇಳುತ್ತಿಲ್ಲ. ಜನರು ಅವರನ್ನು ಸ್ವೀಕರಿಸುವುದಿಲ್ಲ. ಇಷ್ಟೊಂದು ಆಂತರಿಕ ಘರ್ಷಣೆಗಳನ್ನು ಹೊಂದಿರುವ ಮೈತ್ರಿಕೂಟವು ಬಿಹಾರವನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ" ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

DIG ಸೋಮಶೇಖರ್ ಕಾಮಕಾಂಡ ಬಟಾಬಯಲು: ಅಪರಾಧಿ ಪತ್ನಿಗೆ ವಿಡಿಯೋ ಕಾಲ್; ಬೆತ್ತಲಾಗುವಂತೆ ಒತ್ತಡ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!