ದೇಶ

Fake voter list: ಸಮಂತಾ ಪ್ರಭು, ತಮನ್ನಾ ಭಾಟಿಯಾ ಹೆಸರಿರುವ 'ನಕಲಿ ಮತದಾರರ' ಪಟ್ಟಿ; ಕೇಸ್ ದಾಖಲು!

ನಟಿಯರ ಮೂರು ವೋಟರ್ ಕಾರ್ಡ್‌ಗಳಲ್ಲಿ ಒಂದೇ ವಿಳಾಸ ಮುದ್ರಿತವಾಗಿರುವುದು ಕಂಡುಬಂದಿದೆ ಎಂದು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ ಸೈಯದ್ ಯಾಹಿಯಾ ಕಮಾಲ್ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಹೈದರಾಬಾದ್‌: ಜನಪ್ರಿಯ ನಟಿಯರಾದ ಸಮಂತಾ ರುತ್ ಪ್ರಭು, ತಮನ್ನಾ ಭಾಟಿಯಾ ಮತ್ತು ರಾಕುಲ್ ಪ್ರೀತ್ ಸಿಂಗ್ ಅವರ ಹೆಸರು, ಫೋಟೋ ಇರುವ ನಕಲಿ ಮತದಾರರ ಪಟ್ಟಿಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ನಟಿಯರ ಫೋಟೋಗಳು ಮತ್ತು ನಕಲಿ ಮತದಾರರ ಗುರುತಿನ ವಿವರಗಳನ್ನು ಬಳಸಿಕೊಂಡು ನಕಲಿ ಮತದಾರರ ಪಟ್ಟಿ ತಯಾರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಖಚಿತಪಡಿಸಿದ ನಂತರ ಮಧುರಾ ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಟಿಯರ ಮೂರು ವೋಟರ್ ಕಾರ್ಡ್‌ಗಳಲ್ಲಿ ಒಂದೇ ವಿಳಾಸ ಮುದ್ರಿತವಾಗಿರುವುದು ಕಂಡುಬಂದಿದೆ ಎಂದು ಸಹಾಯಕ ಚುನಾವಣಾ ನೋಂದಣಿ ಅಧಿಕಾರಿ ಸೈಯದ್ ಯಾಹಿಯಾ ಕಮಾಲ್ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದು ಸಾರ್ವಜನಿಕರನ್ನು ದಾರಿ ತಪ್ಪಿಸುವ ಮತ್ತು ಅಧಿಕೃತ ಚುನಾವಣಾ ಮಾಹಿತಿಯನ್ನು ದುರುಪಯೋಗಪಡಿಸಿಕೊಳ್ಳುವ ಉದ್ದೇಶಪೂರ್ವಕ ಪ್ರಯತ್ನದ ಭಾಗವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 336(4)(ಮತ್ತೊಬ್ಬರ ಖ್ಯಾತಿಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ) ಮತ್ತು 353(1)(ಸಿ) (ಸಾರ್ವಜನಿಕ ಕಿಡಿಗೇಡಿತನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೋಲೀಸರು ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಪೋಸ್ಟ್‌ಗಳ ಮೂಲವನ್ನು ಪತ್ತೆಹಚ್ಚಲು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!