ಇಂಡಿಯಾ ಗೇಟ್ ಸಾಂದರ್ಭಿಕ ಚಿತ್ರ 
ದೇಶ

Indraprastha: ದೆಹಲಿಗೆ 'ಇಂದ್ರಪ್ರಸ್ಥ' ಎಂದು ಮರು ನಾಮಕರಣಕ್ಕೆ VHP ಒತ್ತಾಯ!

ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ವಿಎಚ್‌ಪಿಯ ದೆಹಲಿ ಘಟಕ ಪತ್ರ ಬರೆದಿದೆ.

ನವದೆಹಲಿ: ರಾಷ್ಟ್ರ ರಾಜಧಾನಿಯನ್ನು ಅದರ ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಸಂಪರ್ಕಿಸಲು ದೆಹಲಿಗೆ 'ಇಂದ್ರಪ್ರಸ್ಥ' ಎಂದು ಮರುನಾಮಕರಣ ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ (VHP) ಭಾನುವಾರ ಒತ್ತಾಯಿಸಿದೆ.

ಈ ಸಂಬಂಧ ದೆಹಲಿ ಸಂಸ್ಕೃತಿ ಸಚಿವ ಕಪಿಲ್ ಮಿಶ್ರಾ ಅವರಿಗೆ ಪತ್ರ ವಿಎಚ್‌ಪಿಯ ದೆಹಲಿ ಘಟಕ ಪತ್ರ ಬರೆದಿದೆ.

ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದ್ರಪ್ರಸ್ಥ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ದೆಹಲಿ ರೈಲು ನಿಲ್ದಾಣವನ್ನು ಇಂದ್ರಪ್ರಸ್ಥ ರೈಲು ನಿಲ್ದಾಣ ಮತ್ತು ಶಹಜಹಾನಾಬಾದ್ ಅಭಿವೃದ್ಧಿ ಮಂಡಳಿಯನ್ನು ಇಂದ್ರಪ್ರಸ್ಥ ಅಭಿವೃದ್ಧಿ ಮಂಡಳಿ ಎಂದು ಮರುನಾಮಕರಣ ಮಾಡುವಂತೆ ಆಗ್ರಹಿಸಿದೆ.

ದೆಹಲಿಯ ಹೆಸರನ್ನು ಇಂದ್ರಪ್ರಸ್ಥ ಎಂದು ಬದಲಾಯಿಸಬೇಕು. ಇದರಿಂದ ರಾಜಧಾನಿಯ ಹೆಸರನ್ನು ಅದರ ಪ್ರಾಚೀನ ಇತಿಹಾಸ ಮತ್ತು ಸಂಸ್ಕೃತಿಯೊಂದಿಗೆ ಸಂಯೋಜಿಸಬಹುದು ಎಂದು ವಿಎಚ್‌ಪಿ ದೆಹಲಿ ಪ್ರಾಂತ್ ಕಾರ್ಯದರ್ಶಿ ಸುರೇಂದ್ರ ಕುಮಾರ್ ಗುಪ್ತಾ ಪತ್ರದಲ್ಲಿ ತಿಳಿಸಿದ್ದಾರೆ.

"ಹೆಸರುಗಳು ಕೇವಲ ಬದಲಾವಣೆಗಳಲ್ಲ. ಅವು ರಾಷ್ಟ್ರದ ಪ್ರಜ್ಞೆಯನ್ನು ಪ್ರತಿಬಿಂಬಿಸುತ್ತವೆ. ದೆಹಲಿ ಎಂದು ಹೇಳಿದಾಗ, ನಾವು ಕೇವಲ 2,000 ವರ್ಷಗಳ ಅವಧಿಯನ್ನು ಮಾತ್ರ ನೋಡುತ್ತೇವೆ. ಆದರೆ ಇಂದ್ರಪ್ರಸ್ಥ ಎಂದು ಹೇಳಿದಾಗ, 5,000 ವರ್ಷಗಳ ವೈಭವದ ಇತಿಹಾಸದೊಂದಿಗೆ ಸಂಪರ್ಕ ಸಾಧಿಸುತ್ತೇವೆ" ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್