ರಾಜ್ ಠಾಕ್ರೆ 
ದೇಶ

'96 ಲಕ್ಷ ನಕಲಿ ಮತದಾರರ ಸೇರ್ಪಡೆ': ಚುನಾವಣಾ ಆಯೋಗದ ವಿರುದ್ಧ ರಾಜ್ ಠಾಕ್ರೆ ಕಿಡಿ

ನಕಲಿ ಮತದಾರರನ್ನು ತೆಗೆದು ಹಾಕುವವರೆಗೆ ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಸದಂತೆ ಎಂಎನ್‌ಎಸ್ ಮುಖ್ಯಸ್ಥರು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಮುಂಬೈ: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಕೇಂದ್ರ ಚುನಾವಣಾ ಆಯೋಗವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಮಹಾರಾಷ್ಟ್ರ ನವನಿರ್ಮಾಣ ಸೇನೆ(ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು, ತಾವು ಸ್ವೀಕರಿಸಿದ ಮಾಹಿತಿಯ ಪ್ರಕಾರ 96 ಲಕ್ಷ ನಕಲಿ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂದು ಸೋಮವಾರ ಆರೋಪಿಸಿದ್ದಾರೆ.

ನಕಲಿ ಮತದಾರರನ್ನು ತೆಗೆದು ಹಾಕುವವರೆಗೆ ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಸದಂತೆ ಎಂಎನ್‌ಎಸ್ ಮುಖ್ಯಸ್ಥರು ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಭಾನುವಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುನ್ನ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಎಂಎನ್‌ಎಸ್ ಮುಖ್ಯಸ್ಥರು, "9.6 ಮಿಲಿಯನ್(96 ಲಕ್ಷ) ನಕಲಿ ಮತದಾರರು ಸೇರ್ಪಡೆಗೊಂಡಿದ್ದಾರೆ ಎಂಬ ವಿಶ್ವಾಸಾರ್ಹ ಮಾಹಿತಿ ಇದೀಗ ಬಂದಿದೆ. ಇದು ಮಹಾರಾಷ್ಟ್ರ ಮತ್ತು ದೇಶದ ಮತದಾರರಿಗೆ ಮಾಡಿದ ಅವಮಾನ" ಎಂದು ಹೇಳಿದ್ದರು.

"ಎಲ್ಲಾ ಗ್ರೂಪ್ ಅಧ್ಯಕ್ಷರು(ಗುಂಪು ಅಧ್ಯಕ್ಷರು), ಶಾಖೆಯ ಅಧ್ಯಕ್ಷರು ಮತ್ತು ಚುನಾವಣಾ ಪಟ್ಟಿಯ ಮುಖ್ಯಸ್ಥರು ಮನೆ ಮನೆಗೆ ಹೋಗಿ ಮತಗಳನ್ನು ಎಣಿಸಬೇಕು. ಮತದಾರರ ಪಟ್ಟಿ ಶುದ್ಧವಾಗುವವರೆಗೆ ಮಹಾರಾಷ್ಟ್ರದಲ್ಲಿ ಚುನಾವಣೆ ನಡೆಸದಂತೆ ನಾನು ಚುನಾವಣಾ ಆಯೋಗವನ್ನುಒತ್ತಾಯಿಸುತ್ತಿದ್ದೇನೆ" ಎಂದು ಠಾಕ್ರೆ ಹೇಳಿದ್ದಾರೆ.

ಏತನ್ಮಧ್ಯೆ, ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವತ್, ರಾಜ್ ಠಾಕ್ರೆ ಅವರ ಹೇಳಿಕೆಯನ್ನು ಬೆಂಬಲಿಸಿದ್ದು, ನಕಲಿ ಮತದಾರರ ವಿರುದ್ಧ ವಿರೋಧ ಪಕ್ಷಗಳ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುತ್ತವೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ರಾವತ್, "ನಾವು ಬಿಎಂಸಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಎಂದಿಗೂ ಹೇಳಿಲ್ಲ. ಮೊದಲು ಮತದಾರರ ಪಟ್ಟಿಯನ್ನು ಸರಿಪಡಿಸಬೇಕು ಎಂದು ಹೇಳಿದ್ದೇವೆ. ರಾಜ್ ಠಾಕ್ರೆ ಪ್ರಕಾರ, ಪಟ್ಟಿಯಲ್ಲಿ 9.6 ಮಿಲಿಯನ್ ನಕಲಿ ಮತದಾರರಿದ್ದಾರೆ" ಎಂದು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದರು.

"ನವೆಂಬರ್ 1 ರಂದು, ನಕಲಿ ಮತದಾರರ ವಿರುದ್ಧ ಎಲ್ಲಾ ವಿರೋಧ ಪಕ್ಷಗಳು ನಡೆಸುವ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುತ್ತವೆ" ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಆರೋಪಕ್ಕೆ ಸಿಎಂ ತಿರುಗೇಟು

KL Rahulರನ್ನು ಹೀಗೆ ನಡೆಸಿಕೊಂಡಿದ್ದು ನಿಜಕ್ಕೂ ಹಾಸ್ಯಾಸ್ಪದ: ಮೂರ್ಖತನದ ನಿರ್ಧಾರ ಎಂದು ಟೀಕಿಸಿದ ಮಾಜಿ ನಾಯಕ

ಕಾಂಗ್ರೆಸ್-ಆರ್‌ಜೆಡಿಯಿಂದ 'ಪಿತೂರಿ'; ಬಿಹಾರ ಚುನಾವಣೆಯಿಂದ ಹಿಂದೆ ಸರಿದ ಜೆಎಂಎಂ

News headlines 20-10-2025| ದಕ್ಷಿಣ ಕನ್ನಡ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆ, ಸುಳ್ಳು ಸುದ್ದಿ ಹರಡಿದರೆ ಕೇಸ್- ಸಿದ್ದರಾಮಯ್ಯ; ವೇತನ ನೀಡದೇ ಕಿರುಕುಳ: ಇಂಜಿನಿಯರ್ ಆತ್ಮಹತ್ಯೆ; ಅತಿವೃಷ್ಟಿ: ರಾಜ್ಯಕ್ಕೆ 300 ಕೋಟಿ, ಮಹಾರಾಷ್ಟ್ರಕ್ಕೆ 1,500 ಕೋಟಿ ರೂ ಕೇಂದ್ರ ಪರಿಹಾರ

SCROLL FOR NEXT