ದೆಹಲಿ ಪೊಲೀಸ್  online desk
ದೇಶ

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಐಸಿಸ್ ಉಗ್ರರ ಬಂಧನ

"ಈ ಬಂಧನ ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದೆ" ಎಂದು ಅವರು ಹೇಳಿದ್ದಾರೆ.

ನವದೆಹಲಿ: ದೀಪಾವಳಿಯಂದು ದಕ್ಷಿಣ ದೆಹಲಿಯ ಮಾಲ್ ಮತ್ತು ಸಾರ್ವಜನಿಕ ಉದ್ಯಾನವನ ಸೇರಿದಂತೆ ರಾಷ್ಟ್ರ ರಾಜಧಾನಿಯ ಜನದಟ್ಟಣೆ ಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಶಂಕಿತ ಐಸಿಸ್ ಉಗ್ರರ ಹೆಸರು ದೆಹಲಿಯ ಸಾದಿಕ್ ನಗರ ನಿವಾಸಿ ಅದ್ನಾನ್ ಮತ್ತು ಇನ್ನೊಬ್ಬ ಭೋಪಾಲ್ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಈ ಬಂಧನ ದೆಹಲಿಯಲ್ಲಿ ಸಂಭವನೀಯ ಭಯೋತ್ಪಾದಕ ದಾಳಿಯನ್ನು ತಪ್ಪಿಸಿದೆ" ಎಂದು ಅವರು ಹೇಳಿದ್ದಾರೆ.

ಪೊಲೀಸರು ಅವರ ಬಳಿಯಿಂದ ಐಸಿಸ್‌ಗೆ "ನಿಷ್ಠರಾಗಿ ಪ್ರತಿಜ್ಞೆ" ತೆಗೆದುಕೊಳ್ಳುತ್ತಿರುವ ವಿಡಿಯೋ ಮತ್ತು ದೆಹಲಿಯಲ್ಲಿ ಸ್ಫೋಟ ನಡೆಸಲು ಅವರು ಯೋಜಿಸುತ್ತಿರುವ ಸ್ಥಳಗಳ ಫೋಟೋಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಐಇಡಿಗಾಗಿ ಟೈಮರ್ ಮಾಡಲು ಅವರು ಬಳಸುತ್ತಿದ್ದ ಗಡಿಯಾರ ಮತ್ತು ಐಇಡಿ ತಯಾರಿಸಲು ಅಗತ್ಯವಾದ ವಸ್ತುಗಳನ್ನು ಸಂಗ್ರಹಿಸಲು ಹೋಗುತ್ತಿದ್ದ ಸ್ಥಳಗಳ ಫೋಟೋಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ(ವಿಶೇಷ ಘಟಕ) ಪ್ರಮೋದ್ ಕುಶ್ವಾಹ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದಕ್ಷಿಣ ದೆಹಲಿಯ ಮಾಲ್ ಮತ್ತು ಸಾರ್ವಜನಿಕ ಉದ್ಯಾನವನ ಸೇರಿದಂತೆ ದೆಹಲಿಯಲ್ಲಿ ದಾಳಿ ನಡೆಸಲು ಯೋಜಿಸುತ್ತಿರುವ ಸ್ಥಳಗಳ ಪರಿಶೀಲನೆ ನಡೆಸಲಾಗಿದೆ ಎಂದು ಅವರು ಹೇಳಿದರು.

ಮೊದಲನೆಯದಾಗಿ, ಅಕ್ಟೋಬರ್ 16 ರಂದು ಸಾದಿಕ್ ನಗರದಿಂದ ಒಬ್ಬ ಉಗ್ರನನ್ನು ಬಂಧಿಸಲಾಯಿತು ಮತ್ತು ನಂತರ ಭೋಪಾಲ್‌ನಿಂದ ಮತ್ತೊಬ್ಬನನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!