ನಿತೀಶ್ ಕುಮಾರ್ - ಪ್ರಧಾನಿ ಮೋದಿ 
ದೇಶ

RJD ಜತೆ ಕೈಜೋಡಿಸಿದ್ದು ತಪ್ಪು: ಬಿಹಾರ CM ನಿತೀಶ್ ಕುಮಾರ್

"ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಮತ್ತು ಈಗ ಅವರ ಪುತ್ರರು ಮತ್ತು ಪುತ್ರಿಯರನ್ನು ಅಧಿಕಾರಕ್ಕೆ ತರುವಲ್ಲಿ ನಿರತರಾಗಿದ್ದಾರೆ".

ಸಮಸ್ತಿಪುರ: ಅಲ್ಪಾವಧಿಗೆ ಆರ್‌ಜೆಡಿ ಜೊತೆ ಕೈಜೋಡಿಸಿದ್ದು "ತಪ್ಪು" ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಸಮಸ್ತಿಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜೆಡಿ(ಯು) ಮುಖ್ಯಸ್ಥ ನಿತೀಶ್ ಕುಮಾರ್ ಅರು, ರಾಜ್ಯದ ಅಭಿವೃದ್ಧಿಗಾಗಿ ಮೋದಿ ಸರ್ಕಾರವನ್ನು ಶ್ಲಾಘಿಸಿದರು ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಬೆಂಬಲ ನೀಡುವಂತೆ ಮತದಾರರಿಗೆ ಮನವಿ ಮಾಡಿದರು.

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಹೆಸರನ್ನು ನೇರವಾಗಿ ಉಲ್ಲೇಖಿಸಿದೇ ಪ್ರತಿಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್, ಅವರು ದುರಾಡಳಿತ ಮತ್ತು ಕುಟುಂಬ ಆಡಳಿತವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದರು.

"ಅವರು ತಮ್ಮ ಪತ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರು ಮತ್ತು ಈಗ ಅವರ ಪುತ್ರರು ಮತ್ತು ಪುತ್ರಿಯರನ್ನು ಅಧಿಕಾರಕ್ಕೆ ತರುವಲ್ಲಿ ನಿರತರಾಗಿದ್ದಾರೆ" ಎಂದು 1997 ರಲ್ಲಿ ರಾಬ್ರಿ ದೇವಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಿದ್ದನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!