ಪ್ರಧಾನಿ ಮೋದಿ-ರಾಷ್ಟ್ರಪತಿ ದ್ರೌಪದಿ ಮುರ್ಮು 
ದೇಶ

ಕರ್ನೂಲ್ ಬಸ್ ದುರಂತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ; 2 ಲಕ್ಷ ರೂ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು.

ನವದೆಹಲಿ: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ಬಸ್ ಅಗ್ನಿ ಅಪಘಾತದಲ್ಲಿ ಜೀವಹಾನಿ ಸಂಭವಿಸಿರುವುದು ಅತ್ಯಂತ ದುರದೃಷ್ಟಕರ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮಾಡಿ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ನಡುವೆ ಘಟನೆ ಸಂಬಂಧ ಡಿಐಜಿ ಮಾಹಿತಿ ನೀಡಿದ್ದು, ಬೈಕಿ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.

ಬಸ್ ಪ್ರಯಾಣಿಕರಲ್ಲಿ 39 ವಯಸ್ಕರು ಮತ್ತು ಇಬ್ಬರು ಮಕ್ಕಳಿದ್ದರು. ಈವರೆಗೂ 19 ಜನರನ್ನು ಗುರುತಿಸಿದ್ದೇವೆ, ಅವರು ಸುರಕ್ಷಿತರಾಗಿದ್ದಾರೆ ಮತ್ತು ಆಸ್ಪತ್ರೆಯಲ್ಲಿದ್ದಾರೆ. ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಎಚ್ಚರಗೊಳ್ಳುವ ಮೊದಲೇ ಬಸ್ ಬೆಂಕಿಗೆ ಆಹುತಿಯಾಗಿದೆ. ಇಲ್ಲಿಯವರೆಗೆ ಬಸ್ಸಿನಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಬಸ್ಸಿನ ಮುಖ್ಯ ಚಾಲಕ ಕಾಣೆಯಾಗಿದ್ದಾನೆ. ಮತ್ತೊಬ್ಬ ಚಾಲಕನನ್ನು ಬಂಧಿಸಲಾಗಿದೆ. ಬಸ್ಸಿನ ಡೀಸೆಲ್ ಟ್ಯಾಂಕ್ ಹಾನಿಗೊಳಗಾಗಿಲ್ಲ ಎಂದು ಡಿಐಜಿ ಕೋಯ ಪ್ರವೀಣ್ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚಿತ್ತಾಪುರದಲ್ಲಿ ಪಥ ಸಂಚಲನ: ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ; RSSಗೆ ನಿರಾಸೆ

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ': ಪಿಯೂಷ್ ಗೋಯಲ್

Moonlighting: ಭಾರತದ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು!, ಇ-ಮೇಲ್ ನಿಂದ ಕಳ್ಳಾಟ ಬಯಲು

ಗಾಯಕಿ ವಾರಿಜ ಶ್ರೀ ಜೊತೆ ಸಪ್ತಪದಿ ತುಳಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಫೋಟೋ ವೈರಲ್!

ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!

SCROLL FOR NEXT