ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಬಿಜಾಪುರದಲ್ಲಿ ನಕ್ಸಲರಿಂದ ಇಬ್ಬರು ಗ್ರಾಮಸ್ಥರ ಹತ್ಯೆ

ಉಸುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಕಂಕೇರ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ನಕ್ಸಲರು, ಇಬ್ಬರು ವ್ಯಕ್ತಿಗಳ ಮೇಲೆ ದಾಳಿ ಮಾಡಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಉಸುರ್ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಕಂಕೇರ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕ್ಸಲರ ಗುಂಪೊಂದು ರವಿ ಕಟ್ಟಮ್(25) ಮತ್ತು ತಿರುಪತಿ ಸೋಧಿ(38) ಅವರನ್ನು ಅವರ ಮನೆಗಳಿಂದ ಹೊರಗೆಳೆದು ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಸ್ಥಳದಲ್ಲೇ ಹತ್ಯೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ದಾಳಿಯ ನಂತರ ನಕ್ಸಲರು ಸ್ಥಳದಿಂದ ಓಡಿಹೋದ ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗದಲ್ಲಿ ನಕ್ಸಲರು ಗ್ರಾಮಸ್ಥರನ್ನು ಗುರಿಯಾಗಿಸಿಕೊಂಡಿದ್ದಾರೆ. ಅಕ್ಟೋಬರ್ 14 ರಂದು, ನಕ್ಸಲರು ಬಿಜೆಪಿ ಕಾರ್ಯಕರ್ತನ ಕತ್ತು ಹಿಸುಕಿ ಕೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತ ಮೇಲೆ ಶೇ.50 ಸುಂಕ ರದ್ದು ಮಾಡಿ, ಇದರಿಂದ ನಮ್ಮ ದೇಶಕ್ಕೇ ನಷ್ಟ': Donald Trump ಗೆ ಸೆನೆಟ್ ಸದಸ್ಯರ ಬೇಡಿಕೆ, ನಿರ್ಣಯ ಮಂಡನೆ

ಕಾಂಗ್ರೆಸ್‌ ಪ್ರತಿಭಟನೆಗೆ ಹೊಸ ಅಸ್ತ್ರ: ಆಳಂದ ಮತಗಳ್ಳತನ ಪ್ರಕರಣದಲ್ಲಿ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ CID ಚಾರ್ಜ್ ಶೀಟ್ ಸಲ್ಲಿಕೆ

ದೆಹಲಿಗೆ ಹೋಗುತ್ತಿರುವುದು ಶಕ್ತಿ ಪ್ರದರ್ಶನಕ್ಕಲ್ಲ,'ವೋಟ್ ಚೋರಿ' ಪ್ರತಿಭಟನೆಗೆ: ಡಿ ಕೆ ಶಿವಕುಮಾರ್, ನಾಳೆ ಸಿಎಂ ಪಯಣ

ಕರ್ನಾಟಕ ಅಕ್ರಮದ ಹಾದಿ ಹಿಡಿಯದಿರಲಿ: ಗೃಹ ಸಚಿವ ಪರಮೇಶ್ವರರ "ಧ್ವಂಸ" ಹೇಳಿಕೆಗೆ ಪಿ. ಚಿದಂಬರಂ ಕಿಡಿ!

ತಾಳ್ಮೆ ಕಳೆದುಕೊಂಡು ಪುಟಿನ್-ಎರ್ಡೋಗನ್ ನಡುವಿನ ರಹಸ್ಯ ಸಭೆಗೆ ನುಗ್ಗಿದ ಪಾಕ್ ಪ್ರಧಾನಿ; ಮುಂದೇನಾಯ್ತು?, Video!

SCROLL FOR NEXT