ಕರೂರಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸುವ ಮೊದಲು ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವ ನಟ ವಿಜಯ್  
ದೇಶ

ಕರೂರ್ ಕಾಲ್ತುಳಿತ: ನಟ ವಿಜಯ್ ಸೋಮವಾರ ಸಂತ್ರಸ್ತ ಕುಟುಂಬಗಳ ಭೇಟಿ

ಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ಚೆನ್ನೈ: ಕರೂರ್ ಕಾಲ್ತುಳಿತ ದುರಂತ ನಡೆದು ಒಂದು ತಿಂಗಳ ನಂತರ, ಅಕ್ಟೋಬರ್ 27 ರಂದು ಚೆನ್ನೈ ಬಳಿಯ ಮಹಾಬಲಿಪುರಂನಲ್ಲಿ ಸಂತ್ರಸ್ತ ಕುಟುಂಬಗಳನ್ನು ನಟ-ರಾಜಕಾರಣಿ ವಿಜಯ್ ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಈ ಸಂಬಂಧ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ(ಟಿವಿಕೆ), ರೆಸಾರ್ಟ್‌ನಲ್ಲಿ ಸಭೆ ಏರ್ಪಡಿಸಿದ್ದು, ಅಲ್ಲಿ ಪಕ್ಷವು 50 ಕೊಠಡಿಗಳನ್ನು ಕಾಯ್ದಿರಿಸಿದೆ. ವಿಜಯ್ ಅವರು ದುಃಖಿತ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿ ಮಾಡಿ ಸಂತಾಪ ಸೂಚಿಸಲಿದ್ದಾರೆ ಎನ್ನಲಾಗಿದೆ.

ರೆಸಾರ್ಟ್‌ಗೆ ತೆರಳಲು ಅವರು ನಮಗೆ ಬಸ್ ವ್ಯವಸ್ಥೆ ಮಾಡಿದ್ದಾರೆ. ನಮ್ಮಲ್ಲಿ ಹಲವರು ಹೋಗುತ್ತಿದ್ದೇವೆ ಎಂದು ಸಂತ್ರಸ್ತರ ಕುಟುಂಬ ಸದಸ್ಯರಲ್ಲಿ ಒಬ್ಬರು ಕರೂರಿನಲ್ಲಿ ವರದಿಗಾರರಿಗೆ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ರಂದು ವಿಜಯ್ ಅವರ ಟಿವಿಕೆ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನ ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ತನ್ನ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕಳೆದುಕೊಂಡ ವೇಲುಸಾಮಿಪುರಂನ ಪೆರುಮಾಳ್ ಅವರು, ವರದಿಗಾರರೊಂದಿಗೆ ಮಾತನಾಡಿ, ಸಂತ್ರಸ್ತ ಕುಟುಂಬಗಳು ರೆಸಾರ್ಟ್‌ಗೆ ಹೋಗಿ ಟಿವಿಕೆ ನಾಯಕನನ್ನು ಭೇಟಿ ಮಾಡುವುದು ಸೂಕ್ತವಲ್ಲ. ಅವರೇ ಸಂತ್ರಸ್ತರ ಮನೆಗೆ ಭೇಟಿ ನೀಡಬೇಕು" ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: ಷೇರುಮಾರುಕಟ್ಟೆ 'ರಕ್ತಪಾತ', ಹೂಡಿಕೆದಾರರ 9.40 ಲಕ್ಷ ಕೋಟಿ ರೂ ನಷ್ಟ! ಕುಸಿತಕ್ಕೆ ಕಾರಣವೇನು?

'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Video

T20 World Cup 2026: 'ಟೂರ್ನಿ ಆಡ್ತೇವೆ.. ಆದ್ರೆ ಭಾರತದ ವಿರುದ್ಧ ಆಡಲ್ಲ'; ಐಸಿಸಿಗೆ PCB ಹೊಸ ತಲೆನೋವು!

ಇನ್ಮುಂದೆ ಷೇರು ಮರುಖರೀದಿ ಲಾಭಕ್ಕೂ ತೆರಿಗೆ! Capital gains ಎಂದು ಪರಿಗಣಿಸುವ ಘೋಷಣೆ

U19 World Cup: ಪಾಕಿಸ್ತಾನವನ್ನು ಬಗ್ಗು ಬಡಿದು ಭಾರತ ಸೆಮಿಫೈನಲ್‌ಗೆ ಲಗ್ಗೆ; ಅಫ್ಘಾನ್ ಜೊತೆ ಗುದ್ದಾಟ!

SCROLL FOR NEXT