ಹತ್ಯೆ (ಸಾಂಕೇತಿಕ ಚಿತ್ರ) 
ದೇಶ

ಜಾರ್ಖಂಡ್‌: ಕ್ಷುಲ್ಲಕ ಕಾರಣಕ್ಕೆ ಐಆರ್‌ಬಿ ಯೋಧನಿಗೆ ಗುಂಡಿಕ್ಕಿ ಹತ್ಯೆ

ಮೃತ ಯೋಧನನ್ನು ಚಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಆದರ್ಶ ಕಾಲೋನಿಯ ಯದುವಂಶ ನಗರದ ನಿವಾಸಿ ಅಜಯ್ ಯಾದವ್(25) ಎಂದು ಗುರುತಿಸಲಾಗಿದೆ.

ಬೊಕಾರೊ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಸಣ್ಣ ವಿವಾದಕ್ಕೆ ಸಂಬಂಧಿಸಿದಂತೆ ಭಾರತೀಯ ಮೀಸಲು ಬೆಟಾಲಿಯನ್(ಐಆರ್‌ಬಿ)ನ ಯೋಧನಿಗೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮೃತ ಯೋಧನನ್ನು ಚಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ಆದರ್ಶ ಕಾಲೋನಿಯ ಯದುವಂಶ ನಗರದ ನಿವಾಸಿ ಅಜಯ್ ಯಾದವ್(25) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಯಾದವ್ ಅವರನ್ನು ಗಿರಿದಿಹ್ ಜಿಲ್ಲೆಯಲ್ಲಿ ನಿಯೋಜಿಸಲಾಗಿತ್ತು ಮತ್ತು ಛತ್ ಪೂಜಾ ರಜೆಯ ಸಮಯದಲ್ಲಿ ಚಾಸ್‌ನಲ್ಲಿರುವ ತಮ್ಮ ಊರಿಗೆ ಆಗಮಿಸಿದ್ದರು.

"ಯಾವುದೋ ಕ್ಷುಲ್ಲಕ ಕಾರಣಕ್ಕೆ ಜವಾನ ಮತ್ತು ಬಲರಾಮ್ ತಿವಾರಿ ಎಂಬ ಯುವಕನ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಮಾತಿನ ಚಕಮಕಿ ಗಲಾಟೆಯಾಗಿ ಮಾರ್ಪಟ್ಟಿತು. ಬಲರಾಮ್ ಆರಂಭದಲ್ಲಿ ಸ್ಥಳದಿಂದ ಹೊರಟುಹೋದರು.

ಆದರೆ ಸ್ವಲ್ಪ ಸಮಯದ ನಂತರ, ಅವರು ಪಿಸ್ತೂಲಿನೊಂದಿಗೆ ಬಂದು ಜವಾನನ ಹೊಟ್ಟೆಗೆ ಮೂರು ಸುತ್ತು ಗುಂಡು ಹಾರಿಸಿದರು" ಎಂದು ಚಾಸ್ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ(ಎಸ್‌ಡಿಪಿಒ) ಪ್ರವೀಣ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಯಾದವ್ ಅವರನ್ನು ಬೊಕಾರೊ ಜನರಲ್ ಆಸ್ಪತ್ರೆಗೆ(ಬಿಜಿಹೆಚ್) ಕರೆದೊಯ್ಯಲಾಯಿತು. ಆದರೆ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್‌ಡಿಪಿಒ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel