ಜೈಪುರ: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ಜೈಪುರದ ಮನೋಹರಪುರ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಉತ್ತರ ಪ್ರದೇಶದ ಪಿಲಿಭಿತ್‌ನಿಂದ ಮನೋಹರಪುರದ ಇಟ್ಟಿಗೆ ಭಟ್ಟಿಗೆ ಕಾರ್ಮಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್‌ಪಾಲ್ ಸಿಂಗ್ ಹೇಳಿದ್ದಾರೆ.
ಮನೋಹರಪುರದ ಹಳ್ಳಿಯೊಂದರ ಬಳಿಯ ರಸ್ತೆಯಿಂದ ಬಸ್ ಹಾದು ಹೋಗುವಾಗ ಬಸ್‌ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಾಗಿವೆ ಎಂದು ಸಿಂಗ್ ತಿಳಿಸಿದ್ದಾರೆ.
11,000-ವೋಲ್ಟ್ ಸಾಮರ್ಥ್ಯದ ವಿದ್ಯುತ್ ತಂತಿ ಬಸ್ ಗೆ ತಲುಗಿಲಿದೆ. ಇದರಿಂದ ಭಾರಿ ಬೆಂಕಿ ಹೊತ್ತುಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಸುಟ್ಟುಹೋಗಿದೆ. ನಂತರ ಬೆಂಕಿಯನ್ನು ನಂದಿಸಲಾಯಿತು. ಗಾಯಾಳುಗಳನ್ನು ಶಹಪುರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಾಳುಗಳಲ್ಲಿ ಆರು ಮಂದಿಯನ್ನು ಸುಟ್ಟ ಗಾಯಗಳೊಂದಿಗೆ ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಕೆಲವರಿಗೆ ಶಹಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಕೆಲ ಕಾರ್ಮಿಕರು ಬಸ್‌ನಿಂದ ಜಿಗಿದಿದ್ದಾರೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಪ್ರೇಮ್ ಚಂದ್ ಬೈರ್ವಾ ಹೇಳಿದ್ದಾರೆ.