ಥಾಯ್ ಅಧಿಕಾರಿಗಳ ಭೇಟಿಯಾದ ಭಾರತದ ನಿಯೋಗ 
ದೇಶ

ಮ್ಯಾನ್ಮಾರ್ ನಿಂದ ಪಲಾಯನ, ಥಾಯ್ಲೆಂಡ್ ನಲ್ಲಿ 500 ಭಾರತೀಯರ ಬಂಧನ: ವಾಪಾಸ್ ಕರೆತರಲು ಪ್ರಯತ್ನ ಎಂದ ಕೇಂದ್ರ

ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ..

ನವದೆಹಲಿ: ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಪರಾರಿಯಾಗಿರುವ 500 ಭಾರತೀಯರನ್ನು ದೇಶಕ್ಕೆ ವಾಪಾಸ್ ಕರೆತರಲು ಪ್ರಯತ್ನಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಮ್ಯಾನ್ಮಾರ್‌ನಿಂದ ಥೈಲ್ಯಾಂಡ್‌ಗೆ ಬಂದ ನಂತರ ಹಲವಾರು ಭಾರತೀಯ ಪ್ರಜೆಗಳನ್ನು ಥಾಯ್ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.

ಮ್ಯಾನ್ಮಾರ್​​ನಿಂದ ಥೈಲ್ಯಾಂಡ್‌ಗೆ ಸುಮಾರು 500 ಮಂದಿ ಭಾರತೀಯರು ಅಕ್ರಮವಾಗಿ ಪ್ರವೇಶಿಸಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಥೈಲ್ಯಾಂಡ್‌ನಲ್ಲಿರುವ ಭಾರತೀಯ ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಮನ್ವಯ ಸಾಧಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯ ತಿಳಿಸಿದೆ.

ಮ್ಯಾನ್ಮಾರ್‌ನಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಪಲಾಯನ ಮಾಡಿರಬಹುದು ಎಂದು ಮೂಲಗಳು ತಿಳಿಸಿದ್ದು, ಆ ಭಾರತೀಯ ಪ್ರಜೆಗಳು ಹೇಗೆ ಥಾಯ್ಲೆಂಡ್ ಪ್ರವೇಶಿದರು ಎಂಬುದರ ಕುರಿತು ವಿದೇಶಾಂಗ ಸಚಿವಾಲಯ ವಿವರವಾದ ಮಾಹಿತಿ ಒದಗಿಸಿಲ್ಲ.

ಬಂಧಿತರ ಗುರುತನ್ನು ತಿಳಿಯಲು ಮತ್ತು ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಅವರು ಸುರಕ್ಷಿತವಾಗಿ ಮರಳುವುದನ್ನು ಖಚಿತಪಡಿಸಿಕೊಳ್ಳಲು ಥೈಲ್ಯಾಂಡ್‌ನಲ್ಲಿರುವ ಭಾರತೀಯ ಮಿಷನ್ ಸ್ಥಳೀಯ ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಸಮನ್ವಯ ಸಾಧಿಸುತ್ತಿರುವುದಾಗಿ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

'ಬಂಧಿತ ವ್ಯಕ್ತಿಗಳು ನಿಜವಾಗಿಯೂ ಭಾರತೀಯ ನಾಗರಿಕರೇ ಎಂಬುದನ್ನು ದೃಢಪಡಿಸಲು ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲಾಗುತ್ತಿದೆ. ಈ ಪ್ರಕ್ರಿಯೆಯು ಬ್ಯಾಂಕಾಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಸಂಬಂಧಿತ ಥಾಯ್ ಏಜೆನ್ಸಿಗಳ ನಡುವಿನ ಸಹಯೋಗವನ್ನು ಒಳಗೊಂಡಿರುತ್ತದೆ.

ಥೈಲ್ಯಾಂಡ್‌ನಲ್ಲಿರುವ ನಮ್ಮ ಮಿಷನ್ ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲು ಮತ್ತು ಥೈಲ್ಯಾಂಡ್‌ನಲ್ಲಿ ಅಗತ್ಯ ಕಾನೂನು ಔಪಚಾರಿಕತೆಗಳು ಪೂರ್ಣಗೊಂಡ ನಂತರ ಅವರನ್ನು ವಾಪಸ್ ಕಳುಹಿಸಲು ಥಾಯ್ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ' ಎಂದು ಜೈಸ್ವಾಲ್ ಹೇಳಿದರು.

ಅಕ್ಟೋಬರ್ ಅಂತ್ಯದಲ್ಲಿ 28 ದೇಶಗಳಿಂದ 1,000ಕ್ಕೂ ಹೆಚ್ಚು ಜನರು ಥೈಲ್ಯಾಂಡ್‌ನ ಮೇ ಸೋಟ್ ಅನ್ನು ಪ್ರವೇಶಿಸಿದ್ದರು. ಇದರಲ್ಲಿ ಸುಮಾರು 500 ಭಾರತೀಯರು ಸೇರಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸೋನಿಯಾ ಗಾಂಧಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದರು, ಇನ್ನು ನಾನ್ಯಾವ ಲೆಕ್ಕ: ಸಿಎಂ ಹುದ್ದೆ ಕನಸು ತ್ಯಾಗದ ಸುಳಿವು ನೀಡಿದ್ರಾ DK Shivakumar?

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ!

ಬೆಳಗಾವಿ: ರಾಜ್ಯೋತ್ಸವದಂದು ಕರಾಳದಿನ ಆಚರಣೆಗೆ ಬಂದ MES ಮುಖಂಡನ ಜೊತೆ CPI ಸೆಲ್ಫಿ, ಕನ್ನಡಿಗರ ಆಕ್ರೋಶ!

ಛತ್ತೀಸ್‌ಗಢ ನೂತನ ವಿಧಾನಸಭೆ ಉದ್ಘಾಟಿಸಿದ ಪ್ರಧಾನಿ ಮೋದಿ

ತೆಲಂಗಾಣ ಕಲ್ಯಾಣ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವನೆ; 52 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

SCROLL FOR NEXT