ಸಂಜಯ್ ರಾವತ್ PTI
ದೇಶ

ನನಗೆ ಗಂಭೀರ ಆರೋಗ್ಯ ಸಮಸ್ಯೆ ಇದೆ, ಜನರೊಂದಿಗೆ ಬೆರೆಯಬಾರದು: ಸಂಜಯ್ ರಾವತ್

ಎಕ್ಸ್‌ನಲ್ಲಿ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಜಯ್ ರಾವತ್, ಮುಂದಿನ ವರ್ಷದ ವೇಳೆಗೆ ತಾವು ಸಂಪೂರ್ಣ ಗುಣಮುಖರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬೈ: ಶಿವಸೇನೆ(ಯುಬಿಟಿ) ನಾಯಕ ಸಂಜಯ್ ರಾವತ್ ಶುಕ್ರವಾರ ತಮಗೆ ಗಂಭೀರ ಆರೋಗ್ಯ ಸಮಸ್ಯೆಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಮತ್ತು ಜನರೊಂದಿಗೆ ಬೆರೆಯದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ತಮ್ಮ ಆರೋಗ್ಯ ಸಮಸ್ಯೆ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಜಯ್ ರಾವತ್, ಮುಂದಿನ ವರ್ಷದ ವೇಳೆಗೆ ತಾವು ಸಂಪೂರ್ಣ ಗುಣಮುಖರಾಗುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

"ನೀವೆಲ್ಲರೂ ನನ್ನನ್ನು ಪ್ರೀತಿಸಿದ್ದೀರಿ ಮತ್ತು ನಂಬಿದ್ದೀರಿ. ಆದರೆ ನನಗೆ ಗಂಭೀರ ಆರೋಗ್ಯ ಸಮಸ್ಯೆಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಈ ಸಮಸ್ಯೆಯಿಂದ ಹೊರಬರುತ್ತೇನೆ. ವೈದ್ಯಕೀಯ ಸಲಹೆಯ ಪ್ರಕಾರ, ಸಾರ್ವಜನಿಕವಾಗಿ ಹೊರಗೆ ಹೋಗಬಾರದು ಅಥವಾ ಜನರೊಂದಿಗೆ ಬೆರೆಯಬಾರದು ಎಂದು ನನಗೆ ಸೂಚಿಸಲಾದೆ" ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಆಡಳಿತಾರೂಢ ಬಿಜೆಪಿಯ ಕಟು ಟೀಕಾಕಾರ ಮತ್ತು ಮಹಾರಾಷ್ಟ್ರ ವಿರೋಧ ಪಕ್ಷದ ಧ್ವನಿಯಾಗಿರುವ ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರು, ತಮ್ಮ ದೈನಂದಿನ ಮಾಧ್ಯಮ ಸಂವಾದಗಳಿಗೆ ಹೆಸರುವಾಸಿಯಾಗಿದ್ದಾರೆ.

ನವೆಂಬರ್ 1 ರಂದು ಚುನಾವಣಾ ಆಯೋಗದ ವಿರುದ್ಧ ವಿರೋಧ ಪಕ್ಷಗಳ ಪ್ರತಿಭಟನೆಯಲ್ಲಿ ರಾವತ್ ಭಾಗವಹಿಸುವ ನಿರೀಕ್ಷೆಯಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಾತಿ ಗಣತಿ: ಮನೆ ಮನೆ ಸಮೀಕ್ಷೆ ಮುಕ್ತಾಯ; ರಾಜ್ಯದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?

ದೇಶದ ಮೊದಲ 'ಕಡುಬಡತನ ಮುಕ್ತ' ರಾಜ್ಯ: ಘೋಷಣೆಗೆ ಕೇರಳ ಸಜ್ಜು, ಆರ್ಥಿಕ ತಜ್ಞರ ಆಕ್ಷೇಪವೇನು?

ಸಿಎಂ ಆಗಿ ಡಿಕೆಶಿ ನವೆಂಬರ್ 21ಕ್ಕೆ ಪ್ರಮಾಣ ವಚನ: ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಕುಡಚಿ ಕಾಂಗ್ರೆಸ್ MLA​ ಪುತ್ರನಿಗೆ ಡಿಕೆ ಶಿವಕುಮಾರ್ ಹೆಸರು ನಾಮಕರಣ! ವಿಶೇಷ ಏನು ಗೊತ್ತಾ?

ಬೆಂಗಳೂರು: ಲವರ್ ಜೊತೆ ಸೇರಿ 'ತಾಯಿಯನ್ನೇ ಕೊಂದು' ಆತ್ಮಹತ್ಯೆಯ ನಾಟಕವಾಡಿದ್ದ ಮಗಳು! ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು ಹೇಗೆ ಗೊತ್ತಾ?

SCROLL FOR NEXT