ಪುಟಿನ್-ಮೋದಿ- ಕ್ಸೀ ಜಿನ್ಪಿಂಗ್ online desk
ದೇಶ

SCO Summit: "ಇದು ಫಲಪ್ರದ ಭೇಟಿಯಾಗಿತ್ತು"; ಶೃಂಗಸಭೆ ಮುಗಿಸಿ ಭಾರತಕ್ಕೆ ಪ್ರಧಾನಿ ಮೋದಿ ವಾಪಸ್ ಪ್ರಯಾಣ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ, ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನವದೆಹಲಿ ಮತ್ತು ಮಾಸ್ಕೋ ನಡುವಿನ ಸಹಕಾರವು ಅತ್ಯಗತ್ಯ ಎಂದು ಮೋದಿ ಇದೇ ವೇಳೆ ದೃಢಪಡಿಸಿದ್ದಾರೆ.

ನವದೆಹಲಿ: ಸೋಮವಾರ ನಡೆದ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ಭೇಟಿ ನೀಡಿದ್ದು ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯನ್ನು ಮುಕ್ತಾಯಗೊಳಿಸಿ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ವಾಪಸ್ಸಾಗಿದ್ದಾರೆ. ಮೋದಿ ತಮ್ಮ ಭೇಟಿಯ ಸಮಯದಲ್ಲಿ, ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದ್ದರು.

ಚೀನಾಗೆ ತಮ್ಮ ಭೇಟಿಯ ಕುರಿತು X ಪೋಸ್ಟ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ ಈ ಭೇಟಿಯನ್ನು "ಉತ್ಪಾದಕ" (ಫಲಪ್ರದ) ಎಂದು ಹೇಳಿದ್ದಾರೆ ಮತ್ತು ಪ್ರಮುಖ ಜಾಗತಿಕ ಸಮಸ್ಯೆಗಳ ಕುರಿತು ಭಾರತದ ನಿಲುವನ್ನು ಅವರು ಹೇಗೆ ಒತ್ತಿ ಹೇಳಿದರು ಎಂಬ ಅಂಶವನ್ನು ಎತ್ತಿ ತೋರಿಸಿದರು. "ನಾನು SCO ಶೃಂಗಸಭೆಯಲ್ಲಿ ಭಾಗವಹಿಸಿ ವಿವಿಧ ವಿಶ್ವ ನಾಯಕರೊಂದಿಗೆ ಸಂವಹನ ನಡೆಸಿ ಫಲಪ್ರದ ಭೇಟಿಯನ್ನು ಮುಕ್ತಾಯಗೊಳಿಸಲಾಯಿತು. ಪ್ರಮುಖ ಜಾಗತಿಕ ಸಮಸ್ಯೆಗಳ ಕುರಿತು ಭಾರತದ ನಿಲುವನ್ನು ಸಹ ಒತ್ತಿ ಹೇಳಲಾಯಿತು. ಈ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಚೀನಾ ಸರ್ಕಾರ ಮತ್ತು ಜನರಿಗೆ ಧನ್ಯವಾದಗಳು" ಎಂದು ಮೋದಿ ಬರೆದಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ, ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ನವದೆಹಲಿ ಮತ್ತು ಮಾಸ್ಕೋ ನಡುವಿನ ಸಹಕಾರವು ಅತ್ಯಗತ್ಯ ಎಂದು ಮೋದಿ ಇದೇ ವೇಳೆ ದೃಢಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಟಿಯಾಂಜಿನ್‌ನಲ್ಲಿ ನಡೆದ 25 ನೇ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಿದರು, ಅಲ್ಲಿ ಅವರು ಭಯೋತ್ಪಾದನೆಗೆ ಹಣಕಾಸು ಮತ್ತು ಮೂಲಭೂತವಾದದ ವಿರುದ್ಧ ಕ್ರಮ ಕೈಗೊಳ್ಳಲು ಕರೆ ನೀಡಿದರು.

ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ಬಗ್ಗೆ ಗಮನ ಸೆಳೆದರು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ನಡೆಸುವ ಮತ್ತು ಬೆಂಬಲಿಸುವ ದೇಶಗಳನ್ನು ಹೊಣೆಗಾರರನ್ನಾಗಿ ಮಾಡುವಂತೆ ಗುಂಪನ್ನು ಒತ್ತಾಯಿಸಿದರು. SCO ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದಕ್ಕಾಗಿ ಅವರು ಕಿರ್ಗಿಸ್ತಾನ್‌ಗೆ ಅಭಿನಂದನೆಗಳನ್ನು ಸಲ್ಲಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚಿತ್ತಾಪುರದಲ್ಲಿ ಪಥ ಸಂಚಲನ: ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ; RSSಗೆ ನಿರಾಸೆ

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ': ಪಿಯೂಷ್ ಗೋಯಲ್

Moonlighting: ಭಾರತದ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು!, ಇ-ಮೇಲ್ ನಿಂದ ಕಳ್ಳಾಟ ಬಯಲು

ಗಾಯಕಿ ವಾರಿಜ ಶ್ರೀ ಜೊತೆ ಸಪ್ತಪದಿ ತುಳಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಫೋಟೋ ವೈರಲ್!

ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!

SCROLL FOR NEXT