ನಿರ್ಮಲಾ ಸೀತಾರಾಮನ್ 
ದೇಶ

ದೇಶವಾಸಿಗಳಿಗೆ ಗುಡ್ ನ್ಯೂಸ್: GST ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಎರಡೇ ತೆರಿಗೆ

ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ.

ನವದೆಹಲಿ: ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಬುಧವಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಮಂಡಳಿಯು ಸ್ಲ್ಯಾಬ್ ಗಳಲ್ಲಿ ಮಹತ್ವದ ಬದಲಾವಣೆಗೆ ಬುಧವಾರ ಅನುಮೋದನೆ ನೀಡಿದೆ.

ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ 56ನೇ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಈ ಮಹತ್ವದ ತೆರಿಗೆ ಬದಲಾವಣೆಗಳಿಗೆ ಅನುಮೋದನೆ ನೀಡಲಾಗಿದೆ.

ಪ್ರಸ್ತುತ, ನಾಲ್ಕು GST ಸ್ಲ್ಯಾಬ್‌ಗಳಿದ್ದು, ಶೇ. 5, ಶೇ, 12, ಶೇ. 18 ಮತ್ತು ಶೇ, 28 ರಷ್ಟು ತೆರಿಗೆ ವಿಧಿಸಲಾಗುತ್ತಿದೆ. ಶೇ. 12 ಮತ್ತು ಶೇ. 28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ, ಕೇವಲ ಶೇ. 5 ಮತ್ತು ಶೇ. 18ರ ಎರಡು ಹಂತದ ತೆರಿಗೆ ರಚನೆಯನ್ನು ಜಾರಿಗೆ ತರಲು ಸಭೆ ಒಪ್ಪಿಗೆ ಸೂಚಿಸಿದ್ದು, ಇದು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿದೆ.

ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರು ಬಳಸುವ ವಸ್ತುಗಳ ಮೇಲೆ "ಸಂಪೂರ್ಣ ತೆರಿಗೆ ಕಡಿತ ಮಾಡಲಾಗಿದೆ" ಇದೆ ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ.

ಕೂದಲಿನ ಎಣ್ಣೆ, ಸೋಪು, ಶಾಂಪೂಗಳು, ಹಲ್ಲುಜ್ಜುವ ಬ್ರಷ್‌ಗಳು, ಟೂತ್‌ಪೇಸ್ಟ್, ಸೈಕಲ್‌ಗಳು ಮತ್ತು ಅಡುಗೆ ಸಾಮಾನುಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 5 ಕ್ಕೆ ಇಳಿಸಲಾಗಿದೆ.

ಎಲ್ಲಾ ರಾಜ್ಯಗಳು ಜಿಎಸ್ ಟಿ ದರ ತರ್ಕಬದ್ಧಗೊಳಿಸುವಿಕೆಗೆ ಬೆಂಬಲ ನೀಡಿವೆ ಮತ್ತು ಇದು ಒಮ್ಮತದ ನಿರ್ಧಾರವಾಗಿದೆ ಎಂದು ಜಿಎಸ್ ಟಿ ಮಂಡಳಿ ಸಭೆ ನಂತರ ಬಿಹಾರ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಹೇಳಿದ್ದಾರೆ.

ಜಿಎಸ್‌ಟಿ ದರ ತರ್ಕಬದ್ಧಗೊಳಿಸುವಿಕೆಯಿಂದ ಒಟ್ಟು 47,700 ಕೋಟಿ ರೂ. ನಷ್ಟವಾಗುತ್ತದೆ ಎಂದು ಪಶ್ಚಿಮ ಬಂಗಾಳ ಹಣಕಾಸು ಸಚಿವೆ ಚಂದ್ರಿಮಾ ಭಟ್ಟಾಚಾರ್ಯ ಅವರು ತಿಳಿಸಿದ್ದಾರೆ.

ಡಿಮೆರಿಟ್ ಸರಕುಗಳ ಮೇಲಿನ ತೆರಿಗೆ ಘಟನೆಯ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಮತ್ತು 40 ಪ್ರತಿಶತಕ್ಕಿಂತ ಹೆಚ್ಚಿನ ಲೆವಿ ವಿಧಿಸುವುದನ್ನು ನಂತರ ನಿರ್ಧರಿಸಲಾಗುವುದು ಎಂದು ಉತ್ತರ ಪ್ರದೇಶ ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಹೇಳಿದ್ದಾರೆ.

ಪಾದರಕ್ಷೆ ಮತ್ತು ಉಡುಪುಗಳಿಗ ಮೇಲಿನ ಜಿಎಸ್‌ಟಿ ಇಳಿಕೆಗೆ ಮುಖ್ಯವಾಗಿ ಅನುಮೋದನೆ ನೀಡಲಾಗಿದೆ. 2,500 ವರೆಗಿನ ಬೆಲೆಯ ಪಾದರಕ್ಷೆಗಳು ಮತ್ತು ಸಿದ್ಧ ಉಡುಪುಗಳ ಮೇಲಿನ ತೆರಿಗೆಯನ್ನು ಶೇ. 5ಕ್ಕೆ ಇಳಿಸಲು ಜಿಎಸ್‌ಟಿ ಮಂಡಳಿಯು ಒಪ್ಪಿಗೆ ನೀಡಿದೆ. ಪ್ರಸ್ತುತ, 1,000 ರೂ.ವರೆಗಿನ ವಸ್ತುಗಳಿಗೆ ಶೇ. 5 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯ ವಸ್ತುಗಳಿಗೆ ಶೇ. 12ರಷ್ಟು ತೆರಿಗೆ ವಿಧಿಸಲಾಗುತ್ತಿದೆ.

ಕಾರುಗಳ ಬೆಲೆಯಲ್ಲಿ ಭಾರಿ ಇಳಿಕೆ

ಜಿಎಸ್ ಟಿ ಸ್ಲ್ಯಾಬ್ ಗಳ ಪರಿಷ್ಕರಣೆಯಲ್ಲಿ ಕಾರುಗಳ ಮೇಲಿನ ಜಿಎಸ್ ಟಿಯನ್ನು ಶೇ. 28 ರಿಂದ ಶೇ. 18ಕ್ಕೆ ಇಳಿಸಲಾಗಿದ್ದು, ಹಬ್ಬದ ಅವಧಿಯಲ್ಲಿ ವಾಹನಗಳ ಬೆಲೆಯಲ್ಲಿ ಭಾರೀ ಕಡಿತವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

207 ಮೀಟರ್ ಎತ್ತರಕ್ಕೆ ಉಕ್ಕಿದ ಯಮುನೆ; ದೆಹಲಿಯ ತಗ್ಗು ಪ್ರದೇಶ, ಮಾರುಕಟ್ಟೆಗಳು ಜಲಾವೃತ

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರ?: ಹಾಸಿಗೆ, ದಿಂಬು ಬೇಡಿಕೆ ತೀರ್ಪು ಸೆ.9ಕ್ಕೆ ಕಾಯ್ದಿರಿಸಿದ ಕೋರ್ಟ್!

VIKRAM-32: ಭಾರತದ ಹೊಸ ಬಾಹ್ಯಾಕಾಶ ದರ್ಜೆಯ ಮೈಕ್ರೋಪ್ರೊಸೆಸರ್; Microchip ಮಹತ್ವ, ವಿಶೇಷತೆ ಏನು? ಇಲ್ಲಿದೆ ಮಾಹಿತಿ!

'DNA ಕಳ್ಳತನ' ಭೀತಿ.. ಚೀನಾದಲ್ಲಿ ಸರ್ವಾಧಿಕಾರಿ Kim Jong-un ಮುಟ್ಟಿದ ಎಲ್ಲ ವಸ್ತುಗಳ ಸ್ವಚ್ಛಗೊಳಿಸಿದ ಸಿಬ್ಬಂದಿ, ಕಾರಣ ಏನು? video

7 ವರ್ಷದ ಹಿಂದೆ ವ್ಯಕ್ತಿ ನಾಪತ್ತೆ: ಹೊಸ ಪತ್ನಿ ಜೊತೆಗಿನ Video ನೋಡಿ ಹಳೇ ಪತ್ನಿ ಶಾಕ್; Instagram Reels ನಿಂದ ಸಿಕ್ಕಿಬಿದ್ದ ರೋಚಕ ಕಥೆ!

SCROLL FOR NEXT