ನವಜಾತ ಶಿಶು (ಸಂಗ್ರಹ ಚಿತ್ರ) 
ದೇಶ

ಇಂದೋರ್: ಸರ್ಕಾರಿ ಆಸ್ಪತ್ರೆ NICU ನಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು; ಇಬ್ಬರು ನರ್ಸ್‌ಗಳು ಅಮಾನತು

ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ಭಾನುವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ.

ಇಂದೋರ್: ಇಂದೋರ್‌ನ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ (MYH) ವೈದ್ಯಕೀಯ ನಿರ್ಲಕ್ಷ್ಯದ ಆಘಾತಕಾರಿ ಘಟನೆಯೊಂದರಲ್ಲಿ, ನವಜಾತ ಶಿಶುಗಳ ತೀವ್ರ ನಿಗಾ ಘಟಕದ (NICU) ಒಳಗಿದ್ದ ಎರಡು ನವಜಾತ ಶಿಶುಗಳನ್ನು ಇಲಿಗಳು ಕಚ್ಚಿವೆ. ವಾರಾಂತ್ಯದಲ್ಲಿ ಇಲಿಗಳು ಕಚ್ಚಿದ್ದು, ಒಂದು ಶಿಶು ಮಂಗಳವಾರ ಸಾವಿಗೀಡಾಗಿದೆ. ಆದಾಗ್ಯೂ, ಆಸ್ಪತ್ರೆ ಅಧಿಕಾರಿಗಳು ಸಾವಿಗೆ ಕಾರಣ ಇಲಿ ಕಡಿತವಲ್ಲ, ಆಕೆಯ ಗಂಭೀರ ವೈದ್ಯಕೀಯ ಸ್ಥಿತಿ ಎಂದು ಹೇಳಿದ್ದಾರೆ.

ಮಹಾರಾಜ ಯಶವಂತರಾವ್ ಆಸ್ಪತ್ರೆಯ NICU ಒಳಗೆ ಭಾನುವಾರ ಮತ್ತು ಸೋಮವಾರ ಸತತವಾಗಿ ಇಲಿಗಳು ಕಚ್ಚಿರುವ ಘಟನೆ ನಡೆದಿವೆ. ಹುಟ್ಟಿ ಮೂರ್ನಾಲ್ಕು ದಿನಗಳಷ್ಟೇ ಕಳೆದಿದ್ದ ಎರಡೂ ನವಜಾತ ಶಿಶುಗಳ ಬೆರಳುಗಳು, ತಲೆ ಮತ್ತು ಭುಜಗಳಿಗೆ ಗಾಯಗಳಾಗಿವೆ ಎಂದು ಆಸ್ಪತ್ರೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಮಧ್ಯಪ್ರದೇಶ ವೈದ್ಯಕೀಯ ಶಿಕ್ಷಣ ಇಲಾಖೆಯು ಎಂವೈ ಆಸ್ಪತ್ರೆ ಸಂಯೋಜಿತವಾಗಿರುವ ಎಂಜಿಎಂ ವೈದ್ಯಕೀಯ ಕಾಲೇಜಿನ ಡೀನ್‌ಗೆ ಶೋ-ಕಾಸ್ ನೋಟಿಸ್ ನೀಡಿದೆ. ಆಸ್ಪತ್ರೆ ಆಡಳಿತವು ಹಲವಾರು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಇಬ್ಬರು ನರ್ಸ್‌ಗಳನ್ನು ಅಮಾನತುಗೊಳಿಸಲಾಗಿದ್ದು, ಮುಖ್ಯ ನರ್ಸ್, ಪಿಐಸಿಯು ಉಸ್ತುವಾರಿ ಮತ್ತು ಮಕ್ಕಳ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಿಗೆ ಶೋ-ಕಾಸ್ ನೋಟಿಸ್ ನೀಡಲಾಗಿದೆ. ಹೆಚ್ಚುವರಿಯಾಗಿ, ನರ್ಸಿಂಗ್ ಸೂಪರಿಂಟೆಂಡೆಂಟ್ ಅನ್ನು ಅವರ ಸ್ಥಾನದಿಂದ ವಜಾ ಮಾಡಲಾಗಿದೆ.

ಮೃತಪಟ್ಟ ಹೆಣ್ಣು ಮಗು ಹುಟ್ಟಿದಾಗ ಕೇವಲ 1.2 ಕೆಜಿ ತೂಕವಿತ್ತು ಮತ್ತು ವೈದ್ಯರ ಪ್ರಕಾರ, ಬಹು ಜನ್ಮಜಾತ ಸಮಸ್ಯೆಗಳು, ಕಡಿಮೆ ಹಿಮೋಗ್ಲೋಬಿನ್ ಮಟ್ಟಗಳು ಮತ್ತು ಅಭಿವೃದ್ಧಿಯಾಗದ ಅಂಗಗಳಿಂದ ಬಳಲುತ್ತಿತ್ತು. ಆಕೆ ಸೆಪ್ಟಿಸೆಮಿಯಾಗೆ ಚಿಕಿತ್ಸೆ ಪಡೆಯುತ್ತಿದ್ದಳು.

TOI ಜೊತೆ ಮಾತನಾಡಿದ MGM ವೈದ್ಯಕೀಯ ಕಾಲೇಜಿನ ಡೀನ್ ಡಾ. ಅರವಿಂದ್ ಘಂಘೋರಿಯಾ, ಮಂಗಳವಾರ ಶವಪರೀಕ್ಷೆ ನಡೆಸಲಾಗಿದ್ದು, ವರದಿಯು ಸಾವಿಗೆ ಕಾರಣ ಏನೆಂಬುದನ್ನು ತಿಳಿಸುತ್ತದೆ ಎಂದು ಹೇಳಿದರು.

ಇದಲ್ಲದೆ, ಕೀಟ ನಿಯಂತ್ರಣ ಸಂಸ್ಥೆ ಅಗೈಲ್ ಕಂಪನಿಗೆ ₹1 ಲಕ್ಷ ದಂಡ ವಿಧಿಸಲಾಗಿದೆ ಮತ್ತು ಆಸ್ಪತ್ರೆಯೊಂದಿಗಿನ ಅವರ ಒಪ್ಪಂದವನ್ನು (MoU) ರದ್ದುಗೊಳಿಸುವ ಎಚ್ಚರಿಕೆ ನೀಡಲಾಗಿದೆ. MYH ಸೂಪರಿಂಟೆಂಡೆಂಟ್ ಡಾ. ಅಶೋಕ್ ಯಾದವ್ ಅವರಿಗೆ ಆಸ್ಪತ್ರೆಯಾದ್ಯಂತ ತಕ್ಷಣ ಮತ್ತು ಸಂಪೂರ್ಣ ಕೀಟ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಮಧ್ಯಪ್ರದೇಶ ಮಾನವ ಹಕ್ಕುಗಳ ಆಯೋಗ (MPHRC) ಕೂಡ ಈ ಘಟನೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಹಂಗಾಮಿ ಅಧ್ಯಕ್ಷ ರಾಜೀವ್ ಕುಮಾರ್ ಟಂಡನ್ ಅವರು ಆಸ್ಪತ್ರೆ ತೆಗೆದುಕೊಂಡ ಕ್ರಮಗಳ ಕುರಿತು ಒಂದು ತಿಂಗಳೊಳಗೆ ವಿವರವಾದ ವರದಿಯನ್ನು ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ. ಆಯೋಗವು ಈ ಘಟನೆಯನ್ನು 'ಪ್ರಾಥಮಿಕ ಮಾನವ ಹಕ್ಕುಗಳ ಉಲ್ಲಂಘನೆ' ಎಂದು ಕರೆದಿದೆ. MY ಆಸ್ಪತ್ರೆಯಲ್ಲಿನ ಸುರಕ್ಷತೆ ಮತ್ತು ನೈರ್ಮಲ್ಯ ಪ್ರೋಟೋಕಾಲ್‌ಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

MUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ, ಅಧಿಕಾರಿಗಳು-ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ

ಬೆಂಗಳೂರಿನಲ್ಲಿ ಈದ್ ಮಿಲಾದ್ ಸಂಭ್ರಮ; ನಗರದ ಹಲವಡೆ ಸಂಚಾರ ಬದಲಾವಣೆ, ಪರ್ಯಾಯ ಮಾರ್ಗಗಳು ಹೀಗಿವೆ...

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

SCROLL FOR NEXT