ಹಿಮಾಚಲ ಪ್ರದೇಶದಲ್ಲಿ ಚರಂಡಿಯಲ್ಲಿ ಸಿಲುಕಿದ ಮಿನಿ ಬಸ್  
ದೇಶ

ಉತ್ತರ ಭಾರತದ ಹಲವೆಡೆ ಭಾರಿ ಪ್ರವಾಹ, ಭೂ ಕುಸಿತಕ್ಕೆ ಇದೇ ಕಾರಣ! ಕೇಂದ್ರ, ರಾಜ್ಯಗಳಿಂದ ಉತ್ತರ ಬಯಸಿದ ಸುಪ್ರೀಂ ಕೋರ್ಟ್!

ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿನ ಭಾರಿ ಭೂಕುಸಿತ ಮತ್ತು ಪ್ರವಾಹವನ್ನು ನೋಡಿದ್ದೇವೆ. ಪ್ರವಾಹದಲ್ಲಿ ಅಪಾರ ಪ್ರಮಾಣದ ಮರಗಳು ತೇಲಿಬರುತ್ತಿರುವುದು ಮಾಧ್ಯಮಗಳ ವರದಿಗಳಿಂದ ಗಮನಕ್ಕೆ ಬಂದಿದೆ

ನವದೆಹಲಿ: ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಂತಹ ರಾಜ್ಯಗಳಲ್ಲಿ ಭಾರಿ ಭೂಕುಸಿತ ಮತ್ತು ಪ್ರವಾಹಕ್ಕೆ ಅಕ್ರಮ ಮರ ಕಡಿಯುವಿಕೆ ಕಾರಣವಾಗಿದೆ ಎಂದು ಪರಿಗಣಿಸಿರುವ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತಿತರ ಇತರ ರಾಜ್ಯಗಳಿಂದ ಪ್ರತಿಕ್ರಿಯೆ ಬಯಸಿದೆ.

"ಅಭಿವೃದ್ಧಿ ಮತ್ತು ಪರಿಸರ"ದ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂಬುದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ .ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯ ಪೀಠ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

ಉತ್ತರಾಖಂಡ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನಲ್ಲಿನ ಭಾರಿ ಭೂಕುಸಿತ ಮತ್ತು ಪ್ರವಾಹವನ್ನು ನೋಡಿದ್ದೇವೆ. ಪ್ರವಾಹದಲ್ಲಿ ಅಪಾರ ಪ್ರಮಾಣದ ಮರಗಳು ತೇಲಿಬರುತ್ತಿರುವುದು ಮಾಧ್ಯಮಗಳ ವರದಿಗಳಿಂದ ಗಮನಕ್ಕೆ ಬಂದಿದೆ. ಮೇಲ್ನೋಟಕ್ಕೆ ಅಕ್ರಮವಾಗಿ ಮರಗಳ ಕಡಿಯುವಿಕೆ ಕಂಡುಬಂದಿದೆ. ಹೀಗಾಗಿ ಪ್ರತಿವಾದಿಗಳಿಗೆ ನೋಟಿಸ್ ನೀಡಿ ಎಂದು ಸಿಜೆಐ ಹೇಳಿದರು.

ಅರ್ಜಿದಾರರಾದ ಅನಾಮಿಕಾ ರಾಣಾ ಪರ ಹಾಜರಿದ್ದ ವಕೀಲರಾದ ಆಕಾಶ್ ವಶಿಷ್ಠ ಮತ್ತು ಶುಭಂ ಉಪಾಧ್ಯಾಯ ಅವರಿಗೆ ನೋಟಿಸ್ ಮತ್ತು ಅರ್ಜಿಯ ಪ್ರತಿಯನ್ನು ಕೇಂದ್ರ ಏಜೆನ್ಸಿಯಲ್ಲಿ ಸಲ್ಲಿಸಲು ಪೀಠವು ಅನುಮತಿ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಪರಿಸ್ಥಿತಿಯನ್ನು ಗಮನಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸಿಜೆಐ ಹೇಳಿದರು.

ಇದು ಗಂಭೀರ ಸಮಸ್ಯೆಯಾಗಿ ಕಂಡುಬರುತ್ತಿದೆ. ಸುತ್ತಲೂ ಹೆಚ್ಚಿನ ಸಂಖ್ಯೆಯ ಮರದ ದಿಮ್ಮಿಗಳು ಬೀಳುತ್ತಿರುವುದು ಕಂಡುಬಂದಿದೆ. ಇದು ಅಕ್ರಮವಾಗಿ ಮರಗಳನ್ನು ಕಡಿಯುವುದನ್ನು ತೋರಿಸುತ್ತದೆ. ಪಂಜಾಬ್‌ ಸ್ಥಿತಿಯನ್ನು ನೋಡಿದ್ದೇವೆ. ಸಂಪೂರ್ಣ ಹೊಲಗಳು ಮತ್ತು ಬೆಳೆಗಳು ಜಲಾವೃತವಾಗಿವೆ. ಅಭಿವೃದ್ಧಿಯನ್ನು ತಗ್ಗಿಸುವ ಕ್ರಮಗಳೊಂದಿಗೆ ಪರಿಸರ ಸಮತೋಲನಗೊಳಿಸಬೇಕಾಗಿದೆ ಎಂದು ಹೇಳಿದ ಸಿಜೆಐ, ಈ ವಿಷಯ ಕುರಿತು ಎರಡು ವಾರಗಳ ನಂತರ ವಿಚಾರಣೆ ಮಾಡುವುದಾಗಿ ಹೇಳಿ ಮುಂದೂಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'INS Vikrant ಪಾಕಿಗಳ ನಿದ್ರೆಗೆಡಿಸಿತ್ತು.. ಬ್ರಹ್ಮೋಸ್, ಆಕಾಶ್‌ ಕ್ಷಿಪಣಿಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಬಂದಿದೆ': ಆಪರೇಷನ್ ಸಿಂದೂರ ಕುರಿತು ಪ್ರಧಾನಿ ಮೋದಿ

Bihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ, ಆರ್ ಜೆಡಿಯ 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

'ಸಂಬಳ ನೀಡದೇ ಕಿರುಕುಳ': ಡೆತ್‌ ನೋಟ್‌ ಬರೆದು ಬೆಂಗಳೂರಿನಲ್ಲಿ ಓಲಾ ಎಂಜಿನಿಯರ್ ಆತ್ಮಹತ್ಯೆ, ಭವೀಶ್ ಅಗರ್ವಾಲ್ ವಿರುದ್ಧ ಪ್ರಕರಣ!

ರಾಜ್ಯದಲ್ಲಿ 'PPP' ಮಾದರಿಯಲ್ಲಿ ಎಂಟು ವೈದ್ಯಕೀಯ ಕಾಲೇಜುಗಳು: ಸರ್ಕಾರದ ಪ್ರಸ್ತಾವನೆಗೆ ಶಿಕ್ಷಣ ತಜ್ಞರ ಆಕ್ಷೇಪ!

ಬೆಂಗಳೂರಿನ ಮೂಲಸೌಕರ್ಯ ಬಗ್ಗೆ ಟೀಕೆ: ನಾವು ಹೇಗಿದ್ವಿ, ಹೇಗಾದ್ವಿ? ಅನ್ನೋದನ್ನ ಮರೆತು ಮಾತಡ್ತಾರೆ; ಉದ್ಯಮಿ ಗಳಿಗೆ ಡಿಕೆಶಿ ಟಾಂಗ್!

SCROLL FOR NEXT