ಶಬೀರ್ ಅಹ್ಮದ್ ಷಾ 
ದೇಶ

Terror Funding Case: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಕಾರ!

ಅಹ್ಮದ್ ಷಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅರ್ಜಿದಾರರು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ನವದೆಹಲಿ: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಶಬೀರ್ ಅಹ್ಮದ್ ಷಾಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ಈ ಪ್ರಕರಣದಲ್ಲಿ ಜಾಮೀನು ನೀಡಲು ದೆಹಲಿ ಹೈಕೋರ್ಟ್ ಜೂನ್ 12 ರಂದು ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಷಾ ಸಲ್ಲಿಸಿರುವ ಅರ್ಜಿ ಕುರಿತು ಎರಡು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ನ್ಯಾಯ ಪೀಠ ಸೂಚಿಸಿತು.

ಅಹ್ಮದ್ ಷಾ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅರ್ಜಿದಾರರು ತುಂಬಾ ಅನಾರೋಗ್ಯದಿಂದ ಬಳಲುತ್ತಿದ್ದು, ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಆದರೆ ಮಧ್ಯಂತರ ಜಾಮೀನು ಇಲ್ಲ ಎಂದು ನ್ಯಾಯಮೂರ್ತಿ ನಾಥ್ ಹೇಳಿದರು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಷಾ ಸಲ್ಲಿಸಿದ ಅರ್ಜಿ ಮೇಲೆ ಆರಂಭದಲ್ಲಿ ನ್ಯಾಯಪೀಠ ನೋಟಿಸ್ ನೀಡಿತು. ತನ್ನ ಕಕ್ಷಿದಾರರಿಗೆ ಮಧ್ಯಂತರ ಜಾಮೀನು ಬೇಕು ಎಂದು ಮನವಿ ಮಾಡಿದ ವಕೀಲ ಗೊನ್ಸಾಲ್ವಿಸ್, ತಮ್ಮ ಅರ್ಜಿಯನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಎಂದು ಕೋರಿದರು. ಬಳಿಕ ನ್ಯಾಯಪೀಠ ಪ್ರಕರಣದ ವಿಚಾರಣೆಯನ್ನು ಎರಡು ವಾರ ಮುಂದೂಡಿತು.

ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುವ ಮತ್ತು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.

ಭಾರತದ ವಿರುದ್ಧ ಪಿತೂರಿ, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ, ಕಲ್ಲು ತೂರಾಟ ಮತ್ತು ಹಣ ಸಂಗ್ರಹ ಮತ್ತಿತರ ಆರೋಪದ ಮೇರೆಗೆ ಜೂನ್ 4, 2019ರಲ್ಲಿ ಅಹ್ಮದ್ ಷಾ ಅವರನ್ನು NIA ಬಂಧಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಂದೆಯ ರಾಜಕೀಯ ಜೀವನ ಮುಗಿಯಿತು; ಸತೀಶ್ ಜಾರಕಿಹೊಳಿ 'ಉತ್ತರಾಧಿಕಾರಿ': ಯತೀಂದ್ರ ಸಿದ್ದರಾಮಯ್ಯ ಹೇಳಿಕೆ; ಡಿಕೆಶಿ ಬಣಕ್ಕೆ ಶಾಕ್!

PoK: ಎಲ್‌ಒಸಿ ಉದ್ದಕ್ಕೂ ಭಯೋತ್ಪಾದಕ ಶಿಬಿರಗಳು, ಉಡಾವಣಾ ಪ್ಯಾಡ್‌ಗಳು ಮತ್ತೆ ತಲೆ ಎತ್ತುತ್ತಿವೆ; ಗುಪ್ತಚರ ವರದಿ

ದೀಪ ಹಚ್ಚೋಣ, ಇದು ಬೆಳಕಿನ ಅನ್ವೇಷಣೆಯೆಂಬ ಅನಂತ ಯಾನ (ತೆರೆದ ಕಿಟಕಿ)

'ಇಸ್ಲಾಂ ರಾಜಕೀಯ' ಸನಾತನ ಧರ್ಮಕ್ಕೆ ಅತ್ಯಂತ ಅಪಾಯಕಾರಿ; ಹಲಾಲ್ ಬಗ್ಗೆ ಎಚ್ಚರ: ಸಿಎಂ ಯೋಗಿ ಆದಿತ್ಯನಾಥ್

PNB ವಂಚನೆ ಪ್ರಕರಣ: ಮೆಹುಲ್ ಚೋಕ್ಸಿ ಗಡಿಪಾರಿಗೆ ಬೆಲ್ಜಿಯಂ ಕೋರ್ಟ್ ಅನುಮೋದನೆ; 8 ವರ್ಷ ಭಾರತ ನಡೆಸಿದ್ದ ಹೋರಾಟ ಸಫಲ!

SCROLL FOR NEXT