ಪಾಟ್ನಾ: ಇಲ್ಲಿನ ಫತುಹಾ ಪ್ರದೇಶದ ರೈಲ್ವೆ ನಿಲ್ದಾಣದಿಂದ 22 ವರ್ಷದ ಮಹಿಳೆಯನ್ನು ಇಬ್ಬರು ಪುರುಷರು ಬಂದೂಕು ತೋರಿಸಿ ಅಪಹರಿಸಿದ್ದು, ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಫತುಹಾ-1 ರ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ (SDPO) ಅವದೇಶ್ ಕುಮಾರ್ ತಿಳಿಸಿದ್ದಾರೆ.
'ಮಂಗಳವಾರ ರೈಲಿಗಾಗಿ ಕಾಯುತ್ತಾ ಫತುಹಾ ರೈಲು ನಿಲ್ದಾಣದಲ್ಲಿ ನಿಂತಿದ್ದೆ. ಆಗ ಆರೋಪಿ ಬಂದೂಕು ತೋರಿಸಿ ಆಕೆಯನ್ನು ಬಲವಂತವಾಗಿ ಹತ್ತಿರದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಮಹಿಳೆಗೆ ಅತ್ಯಾಚಾರ ಎಸಗಿದ ಇಬ್ಬರು ಪರಿಚಯವಿರಲಿಲ್ಲ ಎಂದು ಅಧಿಕಾರಿ ಹೇಳಿದರು.
ಆರೋಪಿಗಳಲ್ಲಿ ಒಬ್ಬನನ್ನು ಇತರ ಎಂಟು ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದರು.
ಇಬ್ಬರನ್ನೂ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಸದ್ಯ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕುಮಾರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.