ಪ್ರಧಾನಿ ನರೇಂದ್ರ ಮೋದಿ  online desk
ದೇಶ

ಶಿಕ್ಷಕರ ದಿನಾಚರಣೆ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

ನವದೆಹಲಿ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಭಾರತದ ಮಾಜಿ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ನೆನಪಿಗಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಗುತ್ತದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿಯವರು, ಎಲ್ಲರಿಗೂ, ವಿಶೇಷವಾಗಿ ಶ್ರಮಶೀಲ ಶಿಕ್ಷಕರಿಗೆ ಶಿಕ್ಷಕರದಿನದ ಶುಭಾಶಯಗಳು. ಮನಸ್ಸುಗಳನ್ನು ಪೋಷಿಸುವಲ್ಲಿ ಶಿಕ್ಷಕರ ಸಮರ್ಪಣೆ ಮತ್ತು ಉಜ್ವಲ ಭವಿಷ್ಯದ ಅಡಿಪಾಯವಾಗಿದೆ. ಅವರ ಬದ್ಧತೆ ಮತ್ತು ಸಹಾನುಭೂತಿ ಗಮನಾರ್ಹವಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಭಾರತದ ಮೊದಲ ಉಪ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ನಮನ ಸಲ್ಲಿಸಿರುವ ಮೋದಿಯವರು, ರಾಧಾಕೃಷ್ಣನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರ ಜೀವನ ಮತ್ತು ಚಿಂತನೆಗಳನ್ನು ಸ್ಮರಿಸುತ್ತೇವೆಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿ, ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರು, ಆದರ್ಶ ರಾಜಕಾರಣಿಯಾಗಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸರ್ವಪಲ್ಲಿ ರಾಧಾಕೃಷ್ಣನ್ ಅವರನ್ನು ಅವರ ಜನ್ಮದಿನದ ಸಂದರ್ಭದಲ್ಲಿ ಹೆಮ್ಮೆಯಿಂದ ನೆನೆಯುತ್ತೇನೆ. ಶಿಕ್ಷಣ ಕ್ಷೇತ್ರದ ಬಗೆಗೆ ಅವರಿಗಿದ್ದ ಕಾಳಜಿ ಮತ್ತು ಅವರ ಕೊಡುಗೆಗಳು ಇಂದಿಗೂ ರಾಷ್ಟ್ರವನ್ನು ಬದಲಾವಣೆಯೆಡೆಗೆ ಮುನ್ನಡೆಸುತ್ತಿದೆ. ನಾಡಿನ ನನ್ನೆಲ್ಲಾ ಶಿಕ್ಷಕ ಮಿತ್ರರಿಗೆ ಶಿಕ್ಷಕರ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪೋಸ್ಟ್ ಮಾಡಿ, ಜ್ಞಾನದ ದೀವಿಗೆಯನ್ನು ಬೆಳಗಿ, ನಾಳಿನ ಭಾರತದ ಪ್ರಜೆಗಳನ್ನು ರೂಪಿಸುವ ಪ್ರತಿಯೊಬ್ಬ ಗುರುವಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು. ಕೇವಲ ಪಠ್ಯವನ್ನು ಬೋಧಿಸುವುದಲ್ಲದೆ, ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನೆ, ನೈತಿಕ ಮೌಲ್ಯಗಳು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮೂಲಕ ಸದೃಢ ಮತ್ತು ಪ್ರಗತಿಪರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕ. ನಾಳಿನ ಭಾರತವನ್ನು ರೂಪಿಸುವಲ್ಲಿ ಅವರ ಕೊಡುಗೆಗೆ ಗೌರವಪೂರ್ವಕ ನಮನಗಳು ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಪೋಸ್ಟ್ ಮಾಡಿ, ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಜನ್ಮದಿನದ ಸ್ಮರಣೆಗಳು. ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದು ಹೇಳಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪೋಸ್ಟ್ ಮಾಡಿ, ನಾಡಿನ ಎಲ್ಲ ಶಿಕ್ಷಕರಿಗೆ 'ಶಿಕ್ಷಕರ ದಿನಾಚರಣೆ'ಯ ಹಾರ್ದಿಕ ಶುಭಾಶಯಗಳು ಮತ್ತು ಮಾಜಿ ರಾಷ್ಟ್ರಪತಿ ಭಾರತರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿಯಂದು ಆ ಶ್ರೇಷ್ಠ ಶಿಕ್ಷಕರಿಗೆ ಪ್ರಣಾಮಗಳು. ಜ್ಞಾನ, ಸುಜ್ಞಾನವನ್ನು ಧಾರೆಯೆರೆದು, ಮಕ್ಕಳನ್ನು ಸನ್ಮಾರ್ಗದಲ್ಲಿ ಮುನ್ನಡೆಸಿ ಸತ್ಪ್ರಜೆಗಳನ್ನಾಗಿ ರೂಪಿಸುವ ಎಲ್ಲಾ ಶಿಕ್ಷಕರಿಗೆ ಗೌರವಪೂರ್ವಕ ನಮನಗಳು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!

ವಿಜಯಪುರ: ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ; ಬಿಡಬೇಡ ಖಲಾಸ್ ಮಾಡು, ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿ ಯತ್ನ!

Danger sunroof; ಬಾಲಕನ ತಲೆಗೆ ಬಡಿದ overhead barricade, ಮುಂದೇನಾಯ್ತು..? Video!

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ!

ಹೆಸರಘಟ್ಟದಲ್ಲಿ ಕ್ವಾಂಟಮ್-ಸಿಟಿ ನಿರ್ಮಾಣಕ್ಕೆ 6.17 ಎಕರೆ ಭೂಮಿ ಮಂಜೂರು: ಸಚಿವ ಎನ್ಎಸ್ ಬೋಸರಾಜು

SCROLL FOR NEXT