ಗುಜರಾತ್‌ನ ಪಂಚಮಹಲ್ ಜಿಲ್ಲೆಯಲ್ಲಿ ರೋಪ್ ವೇ ಕೇಬಲ್ ವೈರ್ ತುಂಡಾಗಿ 6 ಮಂದಿ ಸಾವು  online desk
ದೇಶ

Gujarat: ಪಾವಗಡ ಬೆಟ್ಟದ ದೇವಾಲಯದಲ್ಲಿ ರೋಪ್‌ವೇ ದುರಂತ; 6 ಮಂದಿ ಸಾವು; Video

ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಸ್ಥಳದಲ್ಲಿವೆ.

ಅಹ್ಮದಾಬಾದ್: ಗುಜರಾತ್‌ನ ಪಂಚಮಹಲ್ ಜಿಲ್ಲೆಯ ಪ್ರಸಿದ್ಧ ಪಾವಗಡ ಬೆಟ್ಟದ ದೇವಾಲಯದಲ್ಲಿ ಶನಿವಾರ ಸರಕು ಸಾಗಣೆ ರೋಪ್‌ವೇಯ ಕೇಬಲ್ ವೈರ್ ತುಂಡಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಹರೇಶ್ ದುಧಾತ್ ಮಾತನಾಡಿದ್ದು, 6 ಮಂದಿ ಸಾವನ್ನಪ್ಪಿರುವುದನ್ನು ದೃಢಪಡಿಸಿದ್ದಾರೆ ಮತ್ತು ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಸ್ಥಳದಲ್ಲಿವೆ ಎಂದು ಹೇಳಿದ್ದಾರೆ.

ದೇವಾಲಯ ಸುಮಾರು 800 ಮೀಟರ್ ಎತ್ತರದಲ್ಲಿದೆ, ಯಾತ್ರಿಕರು ಶಿಖರವನ್ನು ತಲುಪಲು ಸುಮಾರು 2000 ಮೆಟ್ಟಿಲುಗಳನ್ನು ಹತ್ತಲು ಅಥವಾ ಕೇಬಲ್ ಕಾರುಗಳನ್ನು ಬಳಸಲು ಆಯ್ಕೆ ಮಾಡಿಕೊಳ್ಳುತ್ತಾರೆ.

ಆದಾಗ್ಯೂ, ಪ್ರತಿಕೂಲ ಹವಾಮಾನದಿಂದಾಗಿ ಸಾರ್ವಜನಿಕರ ಬಳಕೆಗೆ ರೋಪ್‌ವೇ ನ್ನು ಬೆಳಿಗ್ಗೆಯಿಂದ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾವಗಡ ಬೆಟ್ಟ ಚಂಪನೇರ್‌ನಿಂದ ಮೂರು ಹಂತಗಳಲ್ಲಿ ಏರುತ್ತದೆ ಮತ್ತು ಅದರ ಪ್ರಸ್ಥಭೂಮಿ 1471 ಅಡಿ ಎತ್ತರದಲ್ಲಿದೆ. ಬೆಟ್ಟದ ತುದಿಯಲ್ಲಿ ಕಾಳಿ ದೇವಿಗೆ ಅರ್ಪಿತವಾದ ದೇವಾಲಯವಿದೆ. ಇಲ್ಲಿಗೆ ಪ್ರತಿ ವರ್ಷ ಸುಮಾರು 25 ಲಕ್ಷ ಪ್ರವಾಸಿಗರು ಆಗಮಿಸುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಯುದ್ಧದ ಕುರಿತು ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಮೋದಿ ಮಹತ್ವದ ಮಾತುಕತೆ

ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!

ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ಸೀತಾರಾಮನ್

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

SCROLL FOR NEXT