ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತನೊಂದಿಗೆ ವಿವಾಹಿತ ಮಹಿಳೆ ಪ್ರೇಮ ಪ್ರಸಂಗ; ಖಾಸಗಿಯಾಗಿದ್ದದ್ದನ್ನು ನೋಡಿದ ಬಾಲಕಿಯ ಕೊಂದ ಆರೋಪಿಗಳ ಬಂಧನ

ಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಹತ್ರಾಸ್: ಸಿಕಂದ್ರಾ ರೌ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಆರು ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದ್ದು, ಆಕೆಯ ಪ್ರಿಯಕರನನ್ನೂ ಬಂಧಿಸಲಾಗಿದೆ.

ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಊರ್ವಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಳು.

ಮಧ್ಯಾಹ್ನ 1.30ರ ಸುಮಾರಿಗೆ, ಕುತ್ತಿಗೆಗೆ ಬಟ್ಟೆ ಸುತ್ತಿದ ಮತ್ತು ಗೋಣಿ ಚೀಲದಲ್ಲಿದ್ದ ರೀತಿಯಲ್ಲಿ ಆಕೆಯ ಶವ ಬಾವಿಯೊಳಗೆ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಕತ್ತು ಹಿಸುಕಿ ಸಾವಿಗೀಡಾಗಿರುವುದನ್ನು ದೃಢಪಡಿಸಿದೆ.

'ಬಂಧಿತ ಮಹಿಳೆ ಮತ್ತು ಅಪ್ರಾಪ್ತ ಬಾಲಕ ಆಕ್ಷೇಪಾರ್ಹ ರೀತಿಯ ಭಂಗಿಯಲ್ಲಿದ್ದದ್ದನ್ನು ಬಾಲಕಿ ನೋಡಿದ್ದಳು. ಬಾಲಕಿ ತನ್ನ ತಂದೆಗೆ ವಿಷಯ ತಿಳಿಸುವುದಾಗಿ ಬೆದರಿಸಿದ್ದಾಳೆ. ಇದರಿಂದಾಗಿ ಅವರಿಬ್ಬರು ಆಕೆಯ ಕತ್ತು ಹಿಸುಕಿ ಕೊಂದಿದ್ದಾರೆ' ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಸಿಂಗ್ ಹೇಳಿದರು.

ಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ. ಘಟನೆಯ ದಿನದಂದು, ತನ್ನ ಪತಿ ಮತ್ತು ಅತ್ತೆ ಹೊರಗೆ ಇದ್ದಾಗ, ಆಕೆ ಬಾಲಕನನ್ನು ಮನೆಗೆ ಕರೆಸಿಕೊಂಡಿದ್ದಳು.

'ಅವರಿಬ್ಬರೂ ಖಾಸಗಿಯಾಗಿದ್ದದ್ದನ್ನು ಕಂಡ ಬಾಲಕಿ, ಎಚ್ಚರಿಕೆ ನೀಡಿದರೂ ಸಹ, ತನ್ನ ತಂದೆಗೆ ಹೇಳುವುದಾಗಿ ಹೇಳಿದ್ದಾಳೆ. ಬಳಿಕ ಆರೋಪಿಗಳಿಬ್ಬರೂ ಆಕೆಯನ್ನು ಕೊಂದು, ಗೋಣಿ ಚೀಲದಲ್ಲಿ ತುಂಬಿಸಿ, ನಿರ್ಜನ ಪ್ರದೇಶದಲ್ಲಿದ್ದ ಪಾಳುಬಿದ್ದ ಬಾವಿಗೆ ಎಸೆದಿದ್ದಾರೆ' ಎಂದು ಅಧಿಕಾರಿ ಹೇಳಿದರು.

ಬಂಧನದ ಸಮಯದಲ್ಲಿ ಮಹಿಳೆಯ ಕೈಯಲ್ಲಿ ಕಚ್ಚಿದ ಗುರುತುಗಳಿದ್ದವು. ಬಹುಶಃ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಬಾಲಕಿಯೇ ಕಚ್ಚಿರಬಹುದು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನೂರು ಶೂಟೌಟ್ ಪ್ರಕರಣ: ನಮ್ಮ ರಾಜ್ಯದ ಆಡಳಿತದಲ್ಲಿ ಮೂಗು ತೂರಿಸಬೇಡಿ, ನಿಮ್ಮ ಕೆಲಸ ನೋಡ್ಕೊಳ್ಳಿ; ತಮಿಳುನಾಡಿಗೆ ಸಿಎಂ ಡಿಕೆಶಿ ವಾರ್ನಿಂಗ್!

ಕೇರಳಿಗರದ್ದು ಇದೆಂಥ ಮನಸ್ಥಿತಿ: ನಟಿ ಮಾಳವಿಕಾಗೆ ಗೋಮಾಂಸ ಇಷ್ಟನಾ? ತಿಂತೀರಾ ಅಂತ ಕೇಳಿದ ಪತ್ರಕರ್ತ; ನೆಟ್ಟಿಗರ ಆಕ್ರೋಶ, Video!

Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!

‘ಆಕೆಯ ಹಿಂದಿನ ಚಟುವಟಿಕೆಗಳು ಹೇಗಿದ್ದವು?’: ಕಂಗನಾಗೆ ಬಾಬಾ ರಾಮ್​ದೇವ್ ತೀವ್ರ ತರಾಟೆ; ಸಂಸದೆ ವಿರುದ್ಧ ಕ್ರಮ ಕೈಗೊಳ್ಳುವಂತೆ BJPಗೆ ಆಗ್ರಹ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್​​ಗೆ ED ಶಾಕ್​: ಮನೆ, ಕಚೇರಿ ಸೇರಿದಂತೆ 13ಕ್ಕೂ ಹೆಚ್ಚು ಕಡೆ ದಾಳಿ