ಸರ್ಕಾರದ ಅಧಿಕೃತ ಸಭೆಯಲ್ಲಿ ಸಿಎಂ ಪತಿ ಮನೀಶ್ ಗುಪ್ತಾ 
ದೇಶ

Delhi: ಸರ್ಕಾರದ ಅಧಿಕೃತ ಸಭೆಯಲ್ಲಿ ಸಿಎಂ ಪತಿ; ರೇಖಾ ಗುಪ್ತಾ ಮತ್ತೊಂದು ವಿವಾದ; ಬಿಜೆಪಿ ವಿರುದ್ಧ AAP, ಕಾಂಗ್ರೆಸ್ ಕಿಡಿ

ತನ್ನ ಪತಿಯೊಂದಿಗೆ ಸಭೆ ನಡೆಸಿರುವ ಪೋಟೋವನ್ನು ರೇಖಾಗುಪ್ತಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾಗುಪ್ತ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸರ್ಕಾರದ ಅಧಿಕೃತ ಸಭೆಯಲ್ಲಿ ಉದ್ಯಮಿ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿರುವ ಅವರ ಪತಿ ಮನೀಶ್ ಗುಪ್ತಾ ಕಾಣಿಸಿಕೊಂಡಿದ್ದು, ಬಿಜೆಪಿ ವಿರುದ್ಧ AAP ಹಾಗೂ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿವೆ.

ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಭಾನುವಾರ ನಡೆದ ಸಭೆಯಲ್ಲಿ ಸದ್ಯ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿ ಹಾಗೂ ಸ್ಥಿತಿಗತಿ ವರದಿಯನ್ನು ನಿಗದಿತ ಅವಧಿಯಲ್ಲಿ ಸಲ್ಲಿಸುವಂತೆ ರೇಖಾಗುಪ್ತಾ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

ತನ್ನ ಪತಿಯೊಂದಿಗೆ ಸಭೆ ನಡೆಸಿರುವ ಪೋಟೋವನ್ನು ರೇಖಾಗುಪ್ತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದು, ದೆಹಲಿ ಸರ್ಕಾರದ ಯಾವುದೇ ಭಾಗವಾಗದಿದ್ದರೂ ಸರ್ಕಾರದ ಅಧಿಕೃತ ಸಭೆಯಲ್ಲಿ ಭಾಗವಹಿಸಲು ಹೇಗೆ ರೇಖಾಗುಪ್ತಾ ಅವಕಾಶ ನೀಡಿದರು ಎಂದು ಎಎಪಿ ಉಸ್ತುವಾರಿ ಸೌರಬ್ ಭಾರದ್ವಾಜ್ ಪ್ರಶ್ನಿಸಿದ್ದಾರೆ.

ದೆಹಲಿ ಸರ್ಕಾರ ಫುಲೇರಾ ಪಂಚಾಯತ್ ಆಗುತ್ತಿದೆ. ಇಲ್ಲಿ ಮಹಿಳೆಯರು ಮುಖ್ಯಸ್ಥರಾಗಿದ್ದರೆ ಅವರ ಪತ್ನಿ ಅಧಿಕಾರ ಚಲಾಯಿಸುತ್ತಾರೆ. ಅದೇ ರೀತಿಯಲ್ಲಿ ಇಂದು ದೆಹಲಿಯಲ್ಲಿ ಸಿಎಂ ಪತಿ ಸರ್ಕಾರದ ಅಧಿಕೃತ ಸಭೆಯಲ್ಲಿ ಭಾಗವಹಿಸಿದ್ದಾರೆ. ಇಂದು ಸಂಪೂರ್ಣವಾಗಿ ಅಸಂವಿಧಾನಿಕವಾಗಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೆಹಲಿಗೆ ಇಬ್ಬರು ಮುಖ್ಯಮಂತ್ರಿಗಳನ್ನು ನೇಮಕ ಮಾಡಿದ್ದಾರೆಯೇ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಪ್ರಶ್ನಿಸಿದ್ದಾರೆ. ದೆಹಲಿ ಸರ್ಕಾರವನ್ನು ರೇಖಾ ಗುಪ್ತ ನಡೆಸುತ್ತಿದ್ದಾರೆಯೇ ಅಥವಾ ಅವರ ಪತಿ ನಡೆಸುತ್ತಿದ್ದಾರೆಯೇ ಎಂದು ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಧಾರವಾಡ: ಕಾರು - ಕ್ಯಾಂಟರ್ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು!

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ