ಅಮೃತಾ ಫಡ್ನವಿಸ್  
ದೇಶ

Amruta Fadnavis: 'ನೀತಿ ಪಾಠ ಹೇಳುವವರೆ ಈ ರೀತಿಯ ಬಟ್ಟೆ ಧರಿಸಿದರೆ ಹೇಗೆ?'; ಮಹಾ ಸಿಎಂ ಪತ್ನಿ ವಿರುದ್ಧ ನೆಟ್ಟಿಗರ ಆಕ್ರೋಶ; Video

ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್‌ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಇತ್ತೀಚಿಗೆ ಅಕ್ಷಯ್ ಕುಮಾರ್ ಅವರೊಂದಿಗೆ ಪಾಲ್ಗೊಂಡಿದ್ದ 'ಬೀಚ್ ಸ್ವಚ್ಛತಾ' ಕಾರ್ಯಕ್ರಮದಲ್ಲಿ ಧರಿಸಿದ್ದ ಬಟ್ಟೆಯಿಂದಾಗಿ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದಾರೆ.

ಅನೇಕ ನೆಟ್ಟಿಗರು ಆಕೆ ಧರಿಸಿದ್ದ ಬಟ್ಟೆ ಅಸಭ್ಯಕರವಾಗಿದ್ದು, ನೀತಿಯ ಪಾಠ ಹೇಳುವವರೆ ಈ ರೀತಿ ಉಡುಪು ಧರಿಸಿದರೆ ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.

ಮತ್ತೆ ಕೆಲವರು ಉಡುಪು ಧರಿಸಿವುದು ಆಕೆಯ ವೈಯಕ್ತಿಕ ಆಯ್ಕೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇದು ಜನರು ಪ್ರಶ್ನೆ ಮಾಡುವಂತಹದಲ್ಲಾ ಎಂದಿದ್ದಾರೆ. ಈ ಘಟನೆಯು ಸಾರ್ವಜನಿಕ ಸಮಾರಂಭಗಳಲ್ಲಿ ಡ್ರೆಸ್ ಕೋಡ್‌ ಬಗ್ಗೆ ಆನ್‌ಲೈನ್‌ನಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ.

ಟ್ರೋಲ್ ಗೆ ಗುರಿಯಾದ ಅಮೃತಾ ಫಡ್ನವೀಸ್

ಗಣೇಶ ಚತುರ್ಥಿಯ 10 ದಿನಗಳ ಹಬ್ಬ ಮುಗಿಯುತ್ತಿದ್ದಂತೆಯೇ ಸಾವಿರಾರು ಗಣೇಶ ಮೂರ್ತಿಗಳ ವಿಸರ್ಜನೆ ನಂತರ ಭಾನುವಾರ ಮುಂಬೈಯ ಜುಹು ಬೀಚ್ ನಲ್ಲಿ ಅಮೃತ ಫಡ್ನವೀಸ್ ಬೀಚ್ ಸ್ವಚ್ಛತೆಯ ಕಾರ್ಯಕ್ರಮ ಆಯೋಜಿಸಿದ್ದರು.

ಅಮೃತಾ ಫಡ್ನವೀಸ್ ಸ್ಥಾಪಿಸಿರುವ ಎನ್‌ಜಿಒ ದಿವ್ಯಾಜ್ ಫೌಂಡೇಶನ್ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ಮತ್ತು ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಕಮಿಷನರ್ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ವಿಡಿಯೋಗಳು ವೈರಲ್ ಆಗಿದ್ದು, ಅನೇಕ ನೆಟ್ಟಿಗರು ಅಮೃತಾ ಧರಿಸಿದ್ದ ಬಟ್ಟೆ ತೀರಾ ಕೆಟ್ಟದಾಗಿದೆ ಎಂದು ಟೀಕಿಸುತ್ತಿದ್ದಾರೆ. ಮತ್ತೆ ಕೆಲವರು ಅದು ಅವರ ಇಷ್ಟ ಎಂದು ಹೇಳುವ ಮೂಲಕ ಸಮರ್ಥಿಸಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ