ಪ್ರಧಾನಿ ಮೋದಿ 
ದೇಶ

ಬಿಹಾರಕ್ಕೆ ಮೋದಿ ಬಂಪರ್ ಗಿಫ್ಟ್: 7,616 ಕೋಟಿ ರೂ ರೈಲು, ರಸ್ತೆ ಯೋಜನೆಗಳಿಗೆ ಕೇಂದ್ರ ಅನುಮೋದನೆ

ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ನವದೆಹಲಿ: ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬಂಪರ್ ಗಿಫ್ಟ್ ನೀಡಿದ್ದು, ಚುನಾವಣೆ ಎದರಿಸಲಿರುವ ರಾಜ್ಯಕ್ಕೆ 7,616 ಕೋಟಿ ರೂ. ಮೌಲ್ಯದ ಎರಡು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಕೇಂದ್ರ ಸರ್ಕಾರ ಬುಧವಾರ ಅನುಮೋದನೆ ನೀಡಿದೆ.

ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿ(ಸಿಸಿಇಎ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಎರಡು ಯೋಜನೆಗಳಲ್ಲಿ ಮೊದಲನೆಯದು 4,447 ಕೋಟಿ ರೂ. ವೆಚ್ಚದಲ್ಲಿ ಬಕ್ಸಾರ್-ಭಾಗಲ್ಪುರ್ ಹೈಸ್ಪೀಡ್ ರಾಷ್ಟ್ರೀಯ ಹೆದ್ದಾರಿ ಕಾರಿಡಾರ್‌ ವಿಭಾಗದ, 82 ಕಿ.ಮೀ. ಹಸಿರು ಮೈದಾನ ಮೊಕಾಮಾ-ಮುಂಗೇರ್ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

ಮುಂದಿನ ಮೂರು ವರ್ಷಗಳಲ್ಲಿ 3,169 ಕೋಟಿ ರೂ. ಅಂದಾಜು ವೆಚ್ಚದಲ್ಲಿ 177 ಕಿ.ಮೀ. ಭಾಗಲ್ಪುರ್-ದುಮ್ಕಾ-ರಾಮ್‌ಪುರ್ಹತ್ ರೈಲು ಮಾರ್ಗವನ್ನು ದ್ವಿಗುಣಗೊಳಿಸಲು ಎರಡನೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಏಕೆಂದರೆ ಇವೆರಡೂ ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ರಸ್ತೆ ಯೋಜನೆಯು ಸರಾಸರಿ ವಾಹನ ವೇಗ ಗಂಟೆಗೆ 80 ಕಿ.ಮೀ. ಮತ್ತು ವಿನ್ಯಾಸದ ವೇಗ ಗಂಟೆಗೆ 100 ಕಿ.ಮೀ. ಆಗಿದ್ದು, ಒಟ್ಟಾರೆ ಪ್ರಯಾಣದ ಸಮಯವನ್ನು ಸುಮಾರು 1.5 ಗಂಟೆಗಳಷ್ಟು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎಂದರು.

"ಈ ಪ್ರದೇಶದಲ್ಲಿ ಹೆಚ್ಚಿದ ಆರ್ಥಿಕ ಚಟುವಟಿಕೆಯು ಭವಿಷ್ಯದಲ್ಲಿ ಸರಕು ಸಾಗಣೆ ಮತ್ತು ಮೊಕಾಮಾ-ಮುಂಗರ್ ವಿಭಾಗದಲ್ಲಿ ಸಂಚಾರವನ್ನು ಹೆಚ್ಚಿಸುವ ನಿರೀಕ್ಷೆಯಿದೆ" ಎಂದು ವೈಷ್ಣವ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 2025: UAE ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ನೇಪಾಳ ಬಿಕ್ಕಟ್ಟು: ಭಾರತದಲ್ಲಿ ಕಟ್ಟೆಚ್ಚರ; ಸಹಾಯವಾಣಿ ಆರಂಭ; ಕಠ್ಮಂಡುವಿಗೆ ವಿಮಾನ, ಬಸ್ ಸೇವೆ ರದ್ದು!

ಮಂಗಳೂರು: ನಕಲಿ ಆಧಾರ್ ಕಾರ್ಡ್‌ ತಯಾರಿಸಿ ಸರ್ಕಾರಿ ಇಲಾಖೆಗಳು, ನ್ಯಾಯಾಲಯಗಳಿಗೆ ವಂಚನೆ; ವ್ಯಕ್ತಿಯ ಬಂಧನ

2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲು

ಗುಜರಾತ್ ಫ್ಲೋರೋ ಕೆಮಿಕಲ್ ಕಂಪನಿಯಲ್ಲಿ ವಿಷಕಾರಿ ಅನಿಲ ಸೋರಿಕೆ: ಓರ್ವ ಸಾವು, 12 ಮಂದಿ ಆಸ್ಪತ್ರೆಗೆ ದಾಖಲು

SCROLL FOR NEXT