ರಾಧಾಕೃಷ್ಣನ್ - ಪ್ರಧಾನಿ ಮೋದಿ 
ದೇಶ

ಶುಕ್ರವಾರ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 67 ವರ್ಷದ ರಾಧಾಕೃಷ್ಣನ್ ಅವರು ವಿರೋಧ ಪಕ್ಷಗಳ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ವಿರುದ್ಧ 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ನವದೆಹಲಿ: ಸಿ ಪಿ ರಾಧಾಕೃಷ್ಣನ್ ಅವರು ಶುಕ್ರವಾರ ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 12 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಉಪ ರಾಷ್ಟ್ರಪತಿಯಾಗಿ ಆಯ್ಕೆಯಾದ ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 67 ವರ್ಷದ ರಾಧಾಕೃಷ್ಣನ್ ಅವರು ವಿರೋಧ ಪಕ್ಷಗಳ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ವಿರುದ್ಧ 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಜುಲೈ 21 ರಂದು ಆಗಿನ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು