ಸಾಂದರ್ಭಿಕ ಚಿತ್ರ 
ದೇಶ

ಕೇರಳದಲ್ಲಿ ಮೆದುಳು ತಿನ್ನುವ ಸೋಂಕಿಗೆ ಆರನೇ ಬಲಿ; ಇನ್ನೂ 10 ರೋಗಿಗಳಿಗೆ ಚಿಕಿತ್ಸೆ

ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಝಿಕೋಡ್: ಕೇರಳದ ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ಮೆದುಳು ತಿನ್ನುವ ಸೋಂಕಿಗೆ ಮತ್ತೊಬ್ಬ ರೋಗಿ ಬಲಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಅಪರೂಪದ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌ (Amoebic meningoencephalitis) ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ಚೆಲಂಬ್ರಾದ ಶಾಜಿ(47) ಅವರು ಕೇರಳದಲ್ಲಿ "ಮೆದುಳು ತಿನ್ನುವ" ಸೋಂಕಿಗೆ ಬಲಿಯಾದ ಆರನೇ ವ್ಯಕ್ತಿಯಾಗಿದ್ದಾರೆ.

ವೈದ್ಯಕೀಯ ಕಾಲೇಜು ಅಧಿಕಾರಿಗಳ ಪ್ರಕಾರ, ಶಾಜಿಯನ್ನು ಆಗಸ್ಟ್ 9 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರ ಸ್ಥಿತಿ ಗಂಭೀರವಾಯಿತು ಮತ್ತು ಇಂದು ಬೆಳಗ್ಗೆ ಅವರು ನಿಧನರಾದರು. ಅಗತ್ಯ ಕಾರ್ಯವಿಧಾನಗಳು ಪೂರ್ಣಗೊಂಡ ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು ಎಂದು ಹೇಳಿದ್ದಾರೆ.

ಕಲುಷಿತ ನೀರಿನಲ್ಲಿ ಇರುವ ಅಮೀಬಾದಿಂದ ಬರುವ ಈ ಸೋಂಕು ಅವರಿಗೆ ಹೇಗೆ ತಗುಲಿತು ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಪ್ರಸ್ತುತ, ಕೋಝಿಕೋಡ್ ವೈದ್ಯಕೀಯ ಕಾಲೇಜಿನಲ್ಲಿ 10 ರೋಗಿಗಳು "ಮೆದುಳು ತಿನ್ನುವ" ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರ, ಮಲಪ್ಪುರಂ ಜಿಲ್ಲೆಯ ವಂಡೂರಿನ 54 ವರ್ಷದ ಮಹಿಳೆ ಕೂಡ ಈ ಕಾಯಿಲೆಯಿಂದ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

ಗಂಡನ ಕೊಂದು ನೀಲಿ ಡ್ರಮ್ ನಲ್ಲಿ ಮುಚ್ಚಿಟ್ಟ ಕೇಸ್: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ ಗೆ ಮರಣದಂಡನೆ ಶಿಕ್ಷೆ!

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!