ಬಾಲಿವುಡ್ ನಟಿ ಕರಿಷ್ಮಾ ಶರ್ಮಾ 
ದೇಶ

Mumbai: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

ಸೀರೆ ಧರಿಸಿ ರೈಲಿನಲ್ಲಿ ಪ್ರಯಾಣಿಸಲು ನಿರ್ಧರಿಸಿದ ಶರ್ಮಾ, ಹೆಚ್ಚಿನ ವೇಗದ ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಆ ರೈಲಿನಲ್ಲಿ ಅವರ ಸ್ನೇಹಿತರು ಇರದಿದ್ದಾಗ ಭಯಗೊಂಡು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದಾರೆ.

ಮುಂಬೈ: 'ರಾಗಿಣಿ ಎಂಎಂಎಸ್ ರಿಟರ್ನ್ಸ್' ಮತ್ತು 'ಪ್ಯಾರ್ ಕಾ ಪಂಚ್ನಾಮಾ' ಸಿನಿಮಾಗಳಿಂದ ಪ್ರಸಿದ್ಧಿಯಾಗಿರುವ ಬಾಲಿವುಡ್ ನಟಿ ಕರಿಷ್ಮಾ ಶರ್ಮಾ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯಕೀಯ ನಿಗಾವಣೆಯಲ್ಲಿದ್ದಾರೆ.

ಶೂಟಿಂಗ್‌ಗಾಗಿ ಚರ್ಚ್‌ಗೇಟ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಶರ್ಮಾ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಅಭಿಮಾನಿಗಳಿಗೆ ಹಾರೈಸುತ್ತಿದ್ದಾರೆ.

ಸೀರೆ ಧರಿಸಿ ರೈಲಿನಲ್ಲಿ ಪ್ರಯಾಣಿಸಲು ನಿರ್ಧರಿಸಿದ ಶರ್ಮಾ, ಹೆಚ್ಚಿನ ವೇಗದ ರೈಲು ಹತ್ತಲು ಪ್ರಯತ್ನಿಸಿದ್ದಾರೆ. ಆದರೆ, ಆ ರೈಲಿನಲ್ಲಿ ಅವರ ಸ್ನೇಹಿತರು ಇರದಿದ್ದಾಗ ಭಯಗೊಂಡು ಚಲಿಸುತ್ತಿದ್ದ ರೈಲಿನಿಂದ ಜಿಗಿದಿದ್ದಾರೆ.

ಪರಿಣಾಮವಾಗಿ ಬೆನ್ನಿನ ಹಿಂಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಅತ್ಯಂತ ನೋವಿನ ಘಟನೆ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ