ನರೇಂದ್ರ ಮೋದಿ - ಮಲ್ಲಿಕಾರ್ಜುನ ಖರ್ಗೆ 
ದೇಶ

ಮಣಿಪುರಕ್ಕೆ ಮೋದಿ ಭೇಟಿ: ಪಶ್ಚಾತ್ತಾಪವೂ ಇಲ್ಲದೆ, ಅಪರಾಧಿ ಭಾವನೆಯೂ ಇಲ್ಲದೆ ಭವ್ಯ ಸ್ವಾಗತ ಹೇಗೆ ಪಡೆದಿರಿ?

ಮಣಿಪುರದಲ್ಲಿ ದೊಡ್ಡ ಮಟ್ಟದಲ್ಲಿ ಹಿಂಸಾಚಾರ ನಡೆದಿದ್ದರೂ ಎರಡು ವರ್ಷಗಳಿಗೂ ಹೆಚ್ಚು ಕಾಲ ಪ್ರಧಾನಿ ಭೇಟಿ ನೀಡಿಲ್ಲ. ಇಂದು ಇಂಫಾಲ ಮತ್ತು ಚುರಚಂದಪುರದಲ್ಲಿ ರೋಡ್ ಶೋ ನಡೆಸಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಣಿಪುರ ಭೇಟಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದು ಜನಾಂಗೀಯ ಹಿಂಸಾಚಾರದಿಂದ ಬಾಧಿತರಾದವರಿಗೆ ಮಾಡಿದ ಗಂಭೀರ ಅವಮಾನ ಎಂದು ಕರೆದಿದ್ದಾರೆ.

ತಮ್ಮ ಎಕ್ಸ್​​ ಖಾತೆಯಲ್ಲಿ ಪೋಸ್ಟ್​​​ ಹಂಚಿಕೊಂಡಿರುವ ಖರ್ಗೆ, ಮಣಿಪುರದಲ್ಲಿ ದೊಡ್ಡ ಮಟ್ಟದಲ್ಲಿ ಹಿಂಸಾಚಾರ ನಡೆದಿದ್ದರೂ ಎರಡು ವರ್ಷಗಳಿಗೂ ಹೆಚ್ಚು ಕಾಲ ಪ್ರಧಾನಿ ಭೇಟಿ ನೀಡಿಲ್ಲ. ಇಂದು ಇಂಫಾಲ ಮತ್ತು ಚುರಚಂದಪುರದಲ್ಲಿ ರೋಡ್ ಶೋ ನಡೆಸಿದ್ದಾರೆ. ಮಣಿಪುರ ಹಿಂಸಾಚಾರಕ್ಕೆ ಮೋದಿ ಬಳಿ ಪಶ್ಚಾತ್ತಾಪವಿಲ್ಲ, ಅಪರಾಧಿ ಭಾವನೆಯೂ ಇಲ್ಲದೆ ಭವ್ಯ ಸ್ವಾಗತ ಪಡೆದಿದ್ದಾರೆ. ಪರಿಹಾರ ಶಿಬಿರಗಳಲ್ಲಿರುವ ಜನರ ಕೂಗು ಕೇಳಿ ಹೇಡಿತನದಿಂದ ತಪ್ಪಿಸಿಕೊಳ್ಳುವ ಪ್ರಯತ್ನವಾಗಿದೆ ಎಂದರು.

ಮೋದಿ ಅದ್ಧೂರಿ ಸ್ವಾಗತ ಸಮಾರಂಭವನ್ನು ಟೀಕಿಸಿದ ಖರ್ಗೆ, ಇದು ಇನ್ನೂ ಬಳಲುತ್ತಿರುವವರ ಗಾಯಗಳಿಗೆ ಕ್ರೂರವಾಗಿ ಚುಚ್ಚಿದಂತಾಗುತ್ತದೆ, ಈ ಅವಧಿಯಲ್ಲಿ ಮೋದಿ 46 ವಿದೇಶ ಪ್ರವಾಸಗಳನ್ನು ಮಾಡಿರುವ ಪ್ರಧಾನಿಗೆ, ದೇಶದ ನಾಗರಿಕರೊಂದಿಗೆ ಸಹಾನುಭೂತಿ ಹಂಚಿಕೊಳ್ಳಲು ಸಮಯ ಸಿಕ್ಕಿಲ್ಲ ಎಂದು ಟೀಕಿಸಿದ್ದಾರೆ.

ಬಿಕ್ಕಟ್ಟನ್ನು ನಿರ್ವಹಿಸುವ ವಿಷಯದಲ್ಲಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರ ಅಸಮರ್ಥತೆ ಎದ್ದು ಕಾಣುತ್ತಿದೆ ಎಂದು ಹೇಳಿದರು. "ನಿಮ್ಮ ರಾಜಧರ್ಮ ಎಲ್ಲಿದೆ?" ಎಂದು ಪ್ರಶ್ನಿಸಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2002 ರಲ್ಲಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿಗೆ ನೀಡಿದ ಹೇಳಿಕೆಯನ್ನು ಖರ್ಗೆ ಉಲ್ಲೇಖಿಸಿದ್ದಾರೆ. ರಾಜಕೀಯವನ್ನು ಮೀರಿ ಬಿಕ್ಕಟ್ಟಿನ ಸಮಯದಲ್ಲಿ ಸಾಂವಿಧಾನಿಕ ಕರ್ತವ್ಯವನ್ನು ಎತ್ತಿಹಿಡಿಯಬೇಕು ಎಂದರು. ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದು, 67,000 ಜನರು ಸ್ಥಳಾಂತರಗೊಂಡರು ಮತ್ತು 1,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾಕಿನಾಡಗೆ ಅಪ್ಪಳಿಸಿದ Cyclone Montha: 3-4 ಗಂಟೆಗಳ ಕಾಲ ಭಾರಿ ಮಳೆ; ಗಂಟೆಗೆ 110 ಕಿ.ಮೀ ವೇಗ!

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯನವರ ಅನಿವಾರ್ಯತೆ ಪಕ್ಷಕ್ಕೆ ಮತ್ತು ರಾಜ್ಯಕ್ಕೆ ಇದೆ: ಯತೀಂದ್ರ ಸಿದ್ದರಾಮಯ್ಯ

ಕದನ ವಿರಾಮ ಉಲ್ಲಂಘನೆ: ಗಾಜಾಪಟ್ಟಿ ಮೇಲೆ ಪ್ರಬಲ ದಾಳಿಗೆ ಆದೇಶಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು!

ಇಂಡಿಯಾ ಬ್ಲಾಕ್ ಪ್ರಣಾಳಿಕೆ 'ಬಿಹಾರ್ ಕಾ ತೇಜಸ್ವಿ ಪ್ರಾಣ್' ಬಿಡುಗಡೆ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿ ಭರವಸೆ!

'ಕರ್ಮ ರಿಟರ್ನ್ಸ್': 'The Kerala Files' ವಿರೋಧಿಸಿದ್ದ CPM ನಾಯಕನಿಗೂ ತಟ್ಟಿದ love Jihad ಬಿಸಿ, ಪುತ್ರಿಯ video ವೈರಲ್!

SCROLL FOR NEXT