ರಾತ್ರಿ ಗಣೇಶ ಮೆರವಣಿಗೆ ವೇಳೆ ನುಗ್ಗಿದ ಟ್ರಕ್  
ದೇಶ

ಹಾಸನ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ, ತಲಾ 2 ಲಕ್ಷ ರೂ ಪರಿಹಾರ ಘೋಷಣೆ

ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.

ನವದೆಹಲಿ: ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಗಣೇಶ ಮೆರವಣಿಗೆ ವೇಳೆ ಚ್ರಕ್ ಹರಿದು 9 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಪ್ರಧಾನಿ ಕಚೇರಿ (PMO) ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದೆ. ಕರ್ನಾಟಕದ ಹಾಸನ ಜಿಲ್ಲೆಯಲ್ಲಿ ಸಂಭವಿಸಿರುವ ಘಟನೆ ನಿಜಕ್ಕೂ ಹೃದಯವಿದ್ರಾವಕವಾಗಿದೆ. ಈ ದುರಂತದಲ್ಲಿ ಹಲವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಮೃತರ ಕುಟುಂಬಸ್ಥರಿಗಾಗಿ ಪಿಎಂಎನ್‌ಆರ್‌ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಹಣವನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಘೋಷಿಸಿದ್ದಾರೆ.

ಘಟನೆ ಹೇಗಾಯಿತು?

ಹಾಸನದಿಂದ ಹೊಳೆನರಸೀಪುರದ ಕಡೆಗೆ ಮಹಾರಾಷ್ಟ್ರಕ್ಕೆ ಸೇರಿದ ಟ್ರಕ್ ಹೋಗುತ್ತಿತ್ತು. ಬೈಕ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ವಾಹನ ನುಗ್ಗಿದೆ. ಬೈಕ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ಭುವನೇಶ್‌ಗೆ ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಗಾಯಗೊಂಡ ಹೊಳೆನರಸೀಪುರ ತಾಲ್ಲೂಕಿನ ಕಟ್ಟೆಬೆಳಗುಲಿಯ ಚಾಲಕ ಭುವನೇಶ್‌ನನ್ನು ಹಾಸನದ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಂಫಾಲ್ ಗೆ ಬಂದಿಳಿದ ಪ್ರಧಾನಿ ಮೋದಿ: ರಸ್ತೆ ಮೂಲಕ ಕುಕಿ ಪ್ರಾಬಲ್ಯದ ಚುರಚಂದ್ ಪುರ್ ಗೆ ಪಯಣ

ದಸರಾ ಒಂದು ಧರ್ಮಕ್ಕೆ ಸೇರಿದ ಕಾರ್ಯಕ್ರಮವಲ್ಲ: 'ಪ್ರತಾಪ್ ಸಿಂಹ' ಸಮಾಜದ ಶಾಂತಿಗೆ ಭಂಗ ತಂದ್ರೆ ಜೋಕೆ ಎಂದ ಸಿಎಂ ಸಿದ್ದರಾಮಯ್ಯ! Video

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಬಿಸಿಸಿಐ 'ಬಹಿಷ್ಕಾರ'?: ಏಷ್ಯಾ ಕಪ್ ಟೂರ್ನಿ ಗತಿಯೇನು?

ಹಾಸನ ದುರಂತ: ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಪರಿಹಾರ ಕೊಡ್ತಿವಿ. ಆದ್ರೆ...ಸಿಎಂ ಸಿದ್ದರಾಮಯ್ಯ ಹೇಳಿದ್ದು ಏನು?

Asia Cup cricket: ಭಾರತ- ಪಾಕಿಸ್ತಾನ ಪಂದ್ಯ: ಶತ್ರು ರಾಷ್ಟ್ರ ಜೊತೆಗೆ ಆಡುವುದಕ್ಕೆ ಬಿಜೆಪಿ, ಬಿಸಿಸಿಐ ವಿರುದ್ಧ ವಿಪಕ್ಷಗಳ ಕಿಡಿ! Video

SCROLL FOR NEXT