ಹಾಟ್ ಏರ್ ಬಲೂನ್ ನಲ್ಲಿ ಬೆಂಕಿ 
ದೇಶ

ಹಾರುವ ಮುನ್ನವೇ ಹಾಟ್ ಏರ್ ಬಲೂನ್ ನಲ್ಲಿ ಬೆಂಕಿ: ಮಧ್ಯಪ್ರದೇಶ ಸಿಎಂ ಸ್ವಲ್ಪದರಲ್ಲೆ ಪಾರು!

ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು.

ಭೋಪಾಲ್‌: ಮಧ್ಯಪ್ರದೇಶದ ಸಿಎಂ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಮಂದಸೋರ್‌ನಲ್ಲಿ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ.

ಶನಿವಾರ ಬೆಳಿಗ್ಗೆ ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೇ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಹಾಟ್ ಏರ್‌ ಬಲೂನ್‌ ಹಾರಾಟದಲ್ಲಿದ್ದಾಗ ಬೆಂಕಿ ಹೊತ್ತಿಕೊಂಡಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ಅದೃಷ್ಟವಶಾತ್‌ ನೆಲದಲ್ಲಿದ್ದಾಗ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ