ಶುಭಂ ದ್ವಿವೇದಿ ಪತ್ನಿ  
ದೇಶ

ಯಾರೂ ಭಾರತ-ಪಾಕ್ ಪಂದ್ಯ ನೋಡಬೇಡಿ, TV ಆಫ್ ಮಾಡಿ: ಪಹಲ್ಗಾಮ್ ಬಲಿಪಶು ಶುಭಂ ದ್ವಿವೇದಿ ಪತ್ನಿ ಕರೆ

ಭಾರತ ಮತ್ತು ಪಾಕಿಸ್ತಾನ ಭಾನುವಾರ ದುಬೈನಲ್ಲಿ ಏಷ್ಯಾ ಕಪ್ ನಲ್ಲಿ ಮುಖಾಮುಖಿಯಾಗಲು ಸಜ್ಜಾಗಿವೆ.

ಲಖನೌ: ಪಹಲ್ಗಾಮ್ ಹತ್ಯಾಕಾಂಡದ ಬಲಿಪಶುಗಳಲ್ಲಿ ಒಬ್ಬರಾದ ಶುಭಂ ದ್ವಿವೇದಿ ಅವರ ಪತ್ನಿ ಐಶಾನ್ಯಾ ದ್ವಿವೇದಿ ಅವರು, ಮುಂಬರುವ ಏಷ್ಯಾ ಕಪ್ 2025 ಚಾಂಪಿಯನ್‌ಶಿಪ್ ನಲ್ಲಿ ಭಾರತ-ಪಾಕಿಸ್ತಾನ ಪಂದ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು ಮತ್ತು ಬಿಸಿಸಿಐನ ಈ ನಡೆ ಖಂಡಿಸಿದರು. ಅಲ್ಲದೆ ಎಲ್ಲರೂ ಈ ಪಂದ್ಯವನ್ನು ಬಹಿಷ್ಕರಿಸುವಂತೆ ಒತ್ತಾಯಿಸಿದರು.

ಭಾರತ ಮತ್ತು ಪಾಕಿಸ್ತಾನ ಭಾನುವಾರ ದುಬೈನಲ್ಲಿ ಏಷ್ಯಾ ಕಪ್ ನಲ್ಲಿ ಮುಖಾಮುಖಿಯಾಗಲು ಸಜ್ಜಾಗಿವೆ.

"ಭಯೋತ್ಪಾದಕ ರಾಷ್ಟ್ರ" ಪಾಕಿಸ್ತಾನದ ವಿರುದ್ಧ ಆಡಲು ಒಪ್ಪಿಕೊಂಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯನ್ನು ಟೀಕಿಸಿದ ಐಶಾನ್ಯಾ, ಈ ವರ್ಷ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡ 26 ಜನರ ತ್ಯಾಗವನ್ನು ಬಿಸಿಸಿಐ ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

"ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಬಿಸಿಸಿಐ ಒಪ್ಪಿಕೊಳ್ಳಬಾರದಿತ್ತು. ಆ 26 ಕುಟುಂಬಗಳ ಬಗ್ಗೆ ಬಿಸಿಸಿಐ ಭಾವನಾತ್ಮಕವಾಗಿಲ್ಲ ಎಂದು ನಾನು ಭಾವಿಸುತ್ತೇನೆ. ನಮ್ಮ ಕ್ರಿಕೆಟಿಗರು ಏನು ಮಾಡುತ್ತಿದ್ದಾರೆ? ಕ್ರಿಕೆಟಿಗರನ್ನು ರಾಷ್ಟ್ರೀಯವಾದಿಗಳು ಎಂದು ಹೇಳಲಾಗುತ್ತದೆ. ಇದನ್ನು ನಮ್ಮ ರಾಷ್ಟ್ರೀಯ ಆಟವೆಂದು ನೋಡಲಾಗುತ್ತದೆ. 1-2 ಕ್ರಿಕೆಟ್ ಆಟಗಾರರನ್ನು ಹೊರತುಪಡಿಸಿ, ಉಳಿದವರು ಯಾರೂ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಬೇಕೆಂದು ಮುಂದೆ ಬರಲಿಲ್ಲ. ಬಿಸಿಸಿಐ ಸಹ ನಮ್ಮ ದೇಶದ ಪರವಾಗಿ ನಿಲುವು ತೆಗೆದುಕೊಳ್ಳಬೇಕು. ಆದರೆ ಅವರು ಹಾಗೆ ಮಾಡುತ್ತಿಲ್ಲ" ಎಂದು ಕಾನ್ಪುರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ದೇಶಾದ್ಯಂತ ಭಾರತ - ಪಾಕ್ ಪಂದ್ಯ ಬಹಿಷ್ಕಾರಕ್ಕೆ ಕರೆ ನೀಡಿದ ಅವರು, ಅಭಿಮಾನಿಗಳು ನಿಲುವು ತೆಗೆದುಕೊಳ್ಳುವಂತೆ ಒತ್ತಾಯಿಸಿದರು. "ನಿಮ್ಮ ಟಿವಿಗಳನ್ನು ಆನ್ ಮಾಡಬೇಡಿ. ಅವರಿಗೆ ಸಂಖ್ಯೆಗಳನ್ನು ನೀಡಬೇಡಿ. ಈ ಪಂದ್ಯವನ್ನು ಬಹಿಷ್ಕರಿಸಿ" ಎಂದರು.

ಏತನ್ಮಧ್ಯೆ, ಸೆಪ್ಟೆಂಬರ್ 14 ರಂದು ನಿಗದಿಯಾಗಿದ್ದ ಭಾರತ-ಪಾಕಿಸ್ತಾನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಕುರಿತು AIMIM ಮತ್ತು ಶಿವಸೇನೆ (UBT) ಸೇರಿದಂತೆ ವಿರೋಧ ಪಕ್ಷಗಳು ಆಡಳಿತಾರೂಢ ಬಿಜೆಪಿ ಮತ್ತು ಬಿಸಿಸಿಐ ವಿರುದ್ಧ ತೀವ್ರ ವಾಗ್ದಾಳಿ ನಡೆಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪರಿಹಾರಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ': ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣದ ಬಗ್ಗೆ ಸ್ಥಳೀಯರ ಅಸಮಾಧಾನ

ಜಾತಿ ರಹಿತ ಸಮಾಜ ನಿರ್ಮಾಣವೇ ಸಂವಿಧಾನದ ಆಶಯ: ಸಿಎಂ ಸಿದ್ದರಾಮಯ್ಯ

ಸಂಚಾರ ದಂಡ ರಿಯಾಯಿತಿಯಿಂದ ಬರೋಬ್ಬರಿ 106 ಕೋಟಿ ಸಂಗ್ರಹ: 37.86 ಲಕ್ಷ ಪ್ರಕರಣ ಇತ್ಯರ್ಥ

AI ವೀಡಿಯೊ ಮೂಲಕ ಪ್ರಧಾನಿ ಮೋದಿ ಮತ್ತು ಅವರ ದಿವಂಗತ ತಾಯಿಯ ತೇಜೋವಧೆ: Congress, ಐಟಿ ಸೆಲ್ ವಿರುದ್ಧ ಎಫ್ಐಆರ್

ರಜನಿಕಾಂತ್ 'Coolie' ಚಿತ್ರದಲ್ಲಿ ನಟಿಸಿದ್ದು ನನ್ನ ದೊಡ್ಡ ತಪ್ಪು ನಿರ್ಧಾರ: Aamir Khan ಹೇಳಿಕೆ ಕುರಿತು ಸ್ಪಷ್ಟನೆ!

SCROLL FOR NEXT