ಬೀದಿ ನಾಯಿ 
ದೇಶ

ಮುಂಬಯಿ: ಒಂದೇ ದಿನದಲ್ಲಿ 67 ನಾಯಿ ಕಡಿತ ಪ್ರಕರಣ ವರದಿ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಕಲ್ಯಾಣ ಮತ್ತು ಡೊಂಬಿವ್ಲಿ ಪ್ರದೇಶದ ವ್ಯಾಪ್ತಿಯಲ್ಲಿ ಒಂದೇ ದಿನದಲ್ಲಿ 67 ಮಂದಿ ಬೀದಿ ನಾಯಿ ಕಡಿತಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲವು ವಾರಗಳಿಂದ, ಈ ಪ್ರದೇಶದಲ್ಲಿ ನಾಯಿ ಕಡಿತದ ಘಟನೆಗಳು ವಿರಳವಾಗಿ ಸಂಭವಿಸುತ್ತಿದ್ದವು. ಆದರೆ ಶನಿವಾರ ಕಲ್ಯಾಣ ಮತ್ತು ಡೊಂಬಿವ್ಲಿ ಪಟ್ಟಣಗಳಲ್ಲಿ ಒಟ್ಟು 67 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಅಧಿಕಾರಿ ಡಾ. ದೀಪಾ ಶುಕ್ಲಾ ತಿಳಿಸಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಿದೆ.

ಕಲ್ಯಾಣ, ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (ಕೆಡಿಎಂಸಿ) ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಹೆಚ್ಚಾಗಿದ್ದು, ಈ ಘಟನೆಗಳಿಗೆ ಕಾರಣವಾಗಿದೆ. ನಾಯಿ ಕಡಿತಕ್ಕೆ ಒಳಗಾದವರಿಗೆ ರೇಬೀಸ್ ನಿರೋಧಕ ಲಸಿಕೆ ಸೇರಿದಂತೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸಲು ಕೆಡಿಎಂಸಿ ನಿಯಮಿತವಾಗಿ ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದೆ. ಪ್ರತಿ ತಿಂಗಳು 1,000 ರಿಂದ 1,100 ನಾಯಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ನಿವಾಸಿಗಳು ತುರ್ತು ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಅಧಿಕಾರದ ಆಸೆಯಿಂದ ಬಂದಿಲ್ಲ.. 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ': ನೇಪಾಳ ನೂತನ ಪ್ರಧಾನಿ Sushila Karki

ರಾಹುಲ್ ವಿರುದ್ಧ 'ಕಿರುಚುವ' ಬದಲು ತನಿಖೆಗೆ ಆದೇಶಿಸಬೇಕಿತ್ತು: 'ಮತ ಕಳ್ಳತನ' ಆರೋಪದ ಬಗ್ಗೆ ಮಾಜಿ ಸಿಇಸಿ

J-K terrorists shift: ಸ್ಥಳೀಯರಿಂದ ಸಿಗದ ಬೆಂಬಲ, ಅರಣ್ಯ 'ಬಂಕರ್' ಗಳಿಗೆ ಉಗ್ರರ ಸ್ಥಳಾಂತರ! ಭಾರತೀಯ ಸೇನೆಗೆ ಹೊಸ ಸವಾಲು

ಪುಣೆ: 'ಪರಿಕ್ಕರ್ ಯಾರು?' ಮಹಾರಾಷ್ಟ್ರ DCM ಅಜಿತ್ ಪವಾರ್ ಗೆ ಗೋವಾದ ಮಾಜಿ ಸಿಎಂ ಬಗ್ಗೆ ಗೊತ್ತಿಲ್ಲವೇ!

ಭಾರತ - ಪಾಕ್ ಕ್ರಿಕೆಟ್ ಪಂದ್ಯ: 26 ಜನರ ಜೀವಗಳಿಗಿಂತ ಆರ್ಥಿಕ ಲಾಭವೇ ಮುಖ್ಯವೇ? ಬಿಜೆಪಿ ವಿರುದ್ಧ ಓವೈಸಿ ಕಿಡಿ

SCROLL FOR NEXT