ಚೆನ್ನೈ: ಜಿಎಸ್‌ಟಿ ಸುಧಾರಣೆಗಳು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಿಕ್ಕ ದೊಡ್ಡ ಗೆಲುವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ತಿಳಿಸಿದ್ದಾರೆ.
ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ಹಬ್ಬಗಳನ್ನು ಆಚರಿಸುವುದರಿಂದ, ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ದೀಪಾವಳಿ ಹಬ್ಬಕ್ಕೂ ಮುನ್ನ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರಲು ನಿರ್ಧರಿಸಲಾಯಿತು ಎಂದು ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.
ಚೆನ್ನೈ ಸಿಟಿಜನ್ಸ್ ಫೋರಂ ಆಯೋಜಿಸಿದ್ದ 'ರೈಸಿಂಗ್ ಭಾರತಕ್ಕಾಗಿ ತೆರಿಗೆ ಸುಧಾರಣೆಗಳು' ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಕು ಮತ್ತು ಸೇವಾ ತೆರಿಗೆ ಸುಧಾರಣೆಯ ಪ್ರಯೋಜನವು ದಿನದ ಆರಂಭದಿಂದ ಜನರು ಮಲಗುವವರೆಗೆ ಎಲ್ಲ ಉತ್ಪನ್ನಗಳಿಗೂ ಇರುತ್ತದೆ ಎಂದು ಹೇಳಿದರು.
ಕೆಲವು ಪ್ರಮುಖ ಉಪಕ್ರಮಗಳನ್ನು ವಿವರಿಸಿದ ಸೀತಾರಾಮನ್, ಈ ಹಿಂದೆ ಜಿಎಸ್‌ಟಿ ಅಡಿಯಲ್ಲಿ ಶೇ 12ರಷ್ಟು ತೆರಿಗೆ ವಿಧಿಸಲಾಗಿದ್ದ ಎಲ್ಲ ಸರಕುಗಳ ಪೈಕಿ ಶೇ 99 ರಷ್ಟು ಈಗ ಶೇ 5ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.
ಇತ್ತೀಚಿನ ಜಿಎಸ್‌ಟಿ ಸುಧಾರಣೆಗಳು ಸೆಪ್ಟೆಂಬರ್ 22 ರಿಂದ ಜಾರಿಗೆ ಬರಲಿವೆ.