ಆರೋಪಿ ಗಗನ್‌ಪ್ರೀತ್  
ದೇಶ

ದೆಹಲಿ BMW ಅಪಘಾತ: ಪ್ರಮುಖ ಆರೋಪಿ ಗಗನ್‌ಪ್ರೀತ್ ಮದ್ಯ ಸೇವಿಸಿಲ್ಲ

ಭಾನುವಾರ ಮಧ್ಯಾಹ್ನ ಗಗನ್‌ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿತ್ತು.

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರ ಸಾವಿಗೆ ಕಾರಣವಾದ, ನೈಋತ್ಯ ದೆಹಲಿಯಲ್ಲಿ ಭಾನುವಾರ ಸಂಭವಿಸಿದ ಬಿಎಂಡಬ್ಲ್ಯು ಕಾರು ಅಪಘಾತದ ಪ್ರಮುಖ ಆರೋಪಿ ಗಗನ್‌ಪ್ರೀತ್ ಅವರ ರಕ್ತದ ಮಾದರಿ ವರದಿ ಬಂದಿದ್ದು, ಅವರು ಮದ್ಯ ಸೇವಿಸಿಲ್ಲ ಎಂದು ಮಂಗಳವಾರ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಧೌಲಾ ಕುವಾನ್ ಪ್ರದೇಶದ ಬಳಿ ಭಾನುವಾರ ಮಧ್ಯಾಹ್ನ ಗಗನ್‌ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ನವಜೋತ್ ಸಿಂಗ್ ಮೃತಪಟ್ಟಿದ್ದು, ಅವರ ಪತ್ನಿ ಗಾಯಗೊಂಡಿದ್ದಾರೆ.

ಅಪಘಾತ ಸಂಬಂಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 281(ದುಡುಕಿನ ಚಾಲನೆ), 125B(ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಮತ್ತು 238(ಸಾಕ್ಷ್ಯಗಳ ಕಣ್ಮರೆಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗಗನ್‌ಪ್ರೀತ್ ಅವರನ್ನು ಸೋಮವಾರ ಮಧ್ಯಾಹ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ನಂತರ ಬಂಧಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ನಂತರ ಅವರನ್ನು ಎರಡು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT