ಭಾರತದ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ ಮತ್ತು ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್. 
ದೇಶ

ಆನ್‌ಲೈನ್ ಬೆಟ್ಟಿಂಗ್‌ ಆ್ಯಪ್ ಪ್ರಕರಣ: ಯುವರಾಜ್‌ ಸಿಂಗ್, ರಾಬಿನ್‌ ಉತ್ತಪ್ಪಗೆ ED ಸಮನ್ಸ್‌

ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ನವದೆಹಲಿ: ಆನ್‌ಲೈನ್ ಬೆಟ್ಟಿಂಗ್‌ಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಮತ್ತು ನಟ ಸೋನು ಸೂದ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.

1 ಎಕ್ಸ್ ಬೆಟ್ ಎಂಬ ಪ್ಲಾಟ್ ಫಾರ್ಮ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂದಿನ ವಾರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಉತ್ತಪ್ಪ (39), ಯುವರಾಜ್ ಸಿಂಗ್ (43) ಮತ್ತು ಸೋನು ಸೂದ್ (52) ಅವರಿಗೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ತನಿಖೆಯ ಭಾಗವಾಗಿ ಫೆಡರಲ್ ತನಿಖಾ ಸಂಸ್ಥೆ ಕಳೆದ ಕೆಲವು ವಾರಗಳಿಂದ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ ಮತ್ತು ಶಿಖರ್ ಧವನ್ ಅವರನ್ನು ವಿಚಾರಣೆ ನಡೆಸಿದೆ.

ಈ ಪ್ರಕರಣದಲ್ಲಿ ಟಿಎಂಸಿಯ ಮಾಜಿ ಸಂಸದ ಮತ್ತು ನಟಿ ಮಿಮಿ ಚಕ್ರವರ್ತಿ ಅವರ ಹೇಳಿಕೆಯನ್ನು ಸೋಮವಾರ ದಾಖಲಿಸಲಾಗಿದೆ.

ಬಂಗಾಳಿ ನಟ ಅಂಕುಶ್ ಹಜ್ರಾ ಅವರು ಮಂಗಳವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾದರು, ಆದರೆ 1xBetನ ಭಾರತದ ಬ್ರಾಂಡ್ ಅಂಬಾಸಿಡರ್ ನಟಿ ಊರ್ವಶಿ ರೌಟೆಲಾ ಅವರು ಮಂಗಳವಾರ ನಿಗದಿತ ದಿನಾಂಕದಂದು ಇನ್ನೂ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರು ಜೊತೆ ತಾಯಿ ಸ್ಥದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ