ತಿರುವನಂತಪುರಂ: ತಿರುವನಂತಪುರಂನ ಬಿಜೆಪಿ ವಾರ್ಡ್ ಕೌನ್ಸಿಲ್ ಕಚೇರಿಯಲ್ಲಿ ಬಿಜೆಪಿ ನಾಯಕ ಮತ್ತು ತಿರುಮಲ ವಾರ್ಡ್ ಕೌನ್ಸಿಲರ್ ಕೆ. ಅನಿಲ್ ಕುಮಾರ್ ಅವರು ಶನಿವಾರ ಶವವಾಗಿ ಪತ್ತೆಯಾಗಿದ್ದಾರೆ.
ಈ ಸಂಬಂಧ ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.
ತಿರುಮಲದ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿರುವ ಬಿಜೆಪಿ ವಾರ್ಡ್ ಕೌನ್ಸಿಲ್ ಕಚೇರಿಯಲ್ಲಿ ಅನಿಲ್ ಕುಮಾರ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಪತ್ತೆಯಾಗಿದ್ದಾರೆ.
ಪೊಲೀಸರ ಪ್ರಕಾರ, ಅನಿಲ್ ಕುಮಾರ್ ಬರೆದಿದ್ದಾರೆಂದು ನಂಬಲಾದ ಡೆತ್ ನೋಟ್ ಸಹ ಕಚೇರಿಯಲ್ಲಿ ಪತ್ತೆಯಾಗಿದೆ. ಅದರಲ್ಲಿ ಅವರು ಸಹಕಾರಿ ಸಂಘಕ್ಕೆ ಸಂಬಂಧಿಸಿದ ಹಣಕಾಸಿನ ಸಮಸ್ಯೆಗಳನ್ನು ಉಲ್ಲೇಖಿಸಿದ್ದಾರೆ ಮತ್ತು ಪಕ್ಷದ ನಾಯಕರಿಂದ ಸರಿಯಾದ ಬೆಂಬಲ ಸಿಗದಿದ್ದಕ್ಕಾಗಿ ನಿರಾಶೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.
ಅನಿಲ್ ಕುಮಾರ್ ಅವರು ಬಿಜೆಪಿ ತಿರುವನಂತಪುರಂ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.