ಪೊಲೀಸರಿಂದ ಕಾವಲು  
ದೇಶ

Bomb threat: ದೆಹಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ; ತೀವ್ರ ಶೋಧ

ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ.

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ಇಂದು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ (Bomb threat) ಮುಂದುವರೆದಿದೆ. ದ್ವಾರಕ ಡಿಪಿಎಸ್ ಸೇರಿದಂತೆ ಹಲವು ಶಾಲೆಗಳಿಗೆ ದುಷ್ಕರ್ಮಿಗಳಿಂದ ಇ-ಮೇಲ್ ಮೂಲಕ​ ಬಾಂಬ್​ ಬೆದರಿಕೆ ಸಂದೇಶ ರವಾನಿಸಲಾಗಿದೆ.

ಬಾಂಬ್ ಬೆದರಿಕೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ.

ಡಿಪಿಎಸ್​ ದ್ವಾರಕಾ ಹಾಗೂ ನಜಾಫ್ ಗಡ, ದೆಹಲಿ ಪಬ್ಲಿಕ್ ಸ್ಕೂಲ್, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಹಾಗೂ ಸರ್ವೋದಯ ವಿದ್ಯಾಲಯ ಸೇರಿ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಪರೀಕ್ಷೆಗಳ ಸಮಯದಲ್ಲಿ ಬಾಂಬ್ ಬೆದರಿಕೆ ಕರೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕರೆ

ದೆಹಲಿಯ ಹಲವು ಶಾಲೆಗಳಿಗೆ ಸರಣಿ ಬಾಂಬ್ ಬೆದರಿಕೆಗಳು ಬರುತ್ತಿವೆ. ಕಳೆದ 8 ತಿಂಗಳಲ್ಲಿ 150ಕ್ಕೂ ಹೆಚ್ಚು ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿವೆ. ಸದ್ಯ ದೆಹಲಿ ಪೊಲೀಸರಿಗೆ ಈ ಬಾಂಬ್ ಬೆದರಿಕೆ ಸಂದೇಶಗಳು ತಲೆನೋವಾಗಿ ಪರಿಣಮಿಸಿದೆ.

"ನಾವು ಕ್ಯಾಂಪಸ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದೇವೆ. ಇನ್ನೂ ಅನುಮಾನಾಸ್ಪದ ವಸ್ತುಗಳು ಏನೂ ಪತ್ತೆಯಾಗಿಲ್ಲ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ, ಬಾಂಬ್ ಬೆದರಿಕೆ ಪೀಡಿತ ಶಾಲೆಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಬೆದರಿಕೆಗಳ ಮೂಲ ಮತ್ತು ಅವು ಭೀತಿಯನ್ನು ಸೃಷ್ಟಿಸುವ ಸಂಘಟಿತ ಪ್ರಯತ್ನದ ಭಾಗವೇ ಎಂದು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!