ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಸಿಬ್ಬಂದಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. 
ದೇಶ

ಜಮ್ಮು ಮತ್ತು ಕಾಶ್ಮೀರ; ಉಗ್ರರೊಂದಿಗೆ ಗುಂಡಿನ ಚಕಮಕಿ, ಯೋಧ ಹುತಾತ್ಮ; ಶೋಧ ಕಾರ್ಯಾಚರಣೆ ಪುನರಾರಂಭ

ಎನ್‌ಕೌಂಟರ್ ನಡೆದ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ರಾತ್ರಿಯಿಡೀ ಸೇನೆ ಸುತ್ತುವರಿದಿದ್ದು, ಶನಿವಾರ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆ ಪುನರಾರಂಭವಾಯಿತು.

ಜಮ್ಮು: ಉಧಂಪುರ ಜಿಲ್ಲೆಯ ದೂರದ ಅರಣ್ಯ ಪ್ರದೇಶದಲ್ಲಿ ಶನಿವಾರ ಮುಂಜಾನೆ ಸೇನೆ ಮತ್ತು ಪೊಲೀಸರು ಭಯೋತ್ಪಾದಕರಿಗಾಗಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದು, ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಉಧಂಪುರದ ದುಡು-ಬಸಂತ್‌ಗಢ ಪ್ರದೇಶದ ಸಿಯೋಜ್ ಧಾರ್ ಅರಣ್ಯ ಗಡಿ ಮತ್ತು ದೋಡಾದ ಭದೇರ್ವಾದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪಿನ (ಎಸ್‌ಒಜಿ) ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಯೋಧ ಗಾಯಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೂಡಲೇ ಯೋಧನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಎನ್‌ಕೌಂಟರ್ ನಡೆದ ಸ್ಥಳದ ಸುತ್ತಮುತ್ತಲಿನ ಪ್ರದೇಶವನ್ನು ರಾತ್ರಿಯಿಡೀ ಸೇನೆ ಸುತ್ತುವರಿದಿದ್ದು, ಶನಿವಾರ ಬೆಳಿಗ್ಗೆ ಜಂಟಿ ಶೋಧ ಕಾರ್ಯಾಚರಣೆ ಪುನರಾರಂಭವಾಯಿತು. ಇಬ್ಬರಿಂದ ಮೂವರು ಭಯೋತ್ಪಾದಕರು ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಧಂಪುರ ಮತ್ತು ದೋಡಾ ಎರಡೂ ಕಡೆಗಳಿಂದ ಡ್ರೋನ್‌ಗಳು ಮತ್ತು ಸ್ನಿಫರ್ ನಾಯಿಗಳನ್ನು ಹೊಂದಿದ ಹೆಚ್ಚುವರಿ ತಂಡಗಳನ್ನು ರವಾನಿಸಲಾಗಿದೆ. ಸದ್ಯ ಬೃಹತ್ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಆದಾಗ್ಯೂ, ಇಲ್ಲಿಯವರೆಗೆ ಉಗ್ರರ ಸುಳಿವು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ಅಮೆರಿಕಕ್ಕೆ ಹಿಂತಿರುಗಿ ಇಲ್ಲದಿದ್ದರೆ ಸಿಕ್ಕಿಹಾಕಿಕೊಳ್ಳುತ್ತೀರಿ: H-1B ವೀಸಾ ನೌಕರರಿಗೆ ವಲಸೆ ಅಟೊರ್ನಿ, ಕಂಪೆನಿಗಳ ಎಚ್ಚರಿಕೆ ಸೂಚನೆ !

Bigg Boss Kannada 12: ಆರಂಭಕ್ಕೆ ಕ್ಷಣಗಣನೆ, ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಂತಿದೆ ನೋಡಿ.

Deepika Student Scholarship: ಅಜೀಂ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗ: ಈ ಬಾರಿ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ!

'Dog Meat' Controversy: ಬೆನ್ನ ಹಿಂದೆ ಮಾತನಾಡುವುದಲ್ಲ, ನೇರಾ ನೇರಾ ಮಾತನಾಡಬೇಕು; ಪಠಾಣ್ ಗೆ ಅಫ್ರಿದಿ ಸವಾಲು!

Caste Census: ಜಾತಿ ಗಣತಿ, ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! ಕಾರಣವೇನು?

SCROLL FOR NEXT