ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳತನದ ದೃಶ್ಯ ಸೆರೆ 
ದೇಶ

Rs 100 crore stolen: ತಿರುಪತಿ 'ಹುಂಡಿ'ಯಲ್ಲಿ 100 ಕೋಟಿ ರೂ ಗೂ ಅಧಿಕ ಹಣ ಕಳ್ಳತನ, CCTV ಕ್ಯಾಮರಾದಲ್ಲಿ ಸೆರೆ!

ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ತಿರುಪತಿ: ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಪರಕಾಮಣಿ (ಹುಂಡಿಯಲ್ಲಿ ಭಕ್ತರು ಹಾಕಿದ್ದ) ರೂ.100 ಕೋಟಿ ಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ಮುಖಂಡರೊಬ್ಬರು ಆರೋಪಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ತಾನಮ್ಸ್ (ಟಿಟಿಡಿ) ಸದಸ್ಯರೂ ಆಗಿರುವ ಭಾನು ಪ್ರಕಾಶ್ ರೆಡ್ಡಿ, ದೇವಸ್ಥಾನದ ಸಿಬ್ಬಂದಿ ರವಿಕುಮಾರ್ ಕಾಣಿಗೆ ಪೆಟ್ಟಿಗೆಯಿಂದ ಹಣವನ್ನು ಕದ್ದಿದ್ದಾರೆ ಎಂದು ಆರೋಪಿಸಿದ್ದು, ಈ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದಾರೆ.

ಲೂಟಿ ಮಾಡಿದ ಹಣವನ್ನು ಬಳಸಿಕೊಂಡು ರಿಯಲ್ ಎಸ್ಟೇಟ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಲಾಗಿದೆ. ಅಕ್ರಮ ಹಣವನ್ನು ಜಗನ್ ರೆಡ್ಡಿ ಅವರ ಮನೆ, ತಾಡೆಪಲ್ಲಿ ಪ್ಯಾಲೇಸ್‌ಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.

2019 ರಿಂದ 2024 ರವರೆಗೆ ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಟಿಟಿಡಿಯ ಇತಿಹಾಸದಲ್ಲಿ ಅತ್ಯಧಿಕ ರೂ. 100 ಕೋಟಿ ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎಗೆ ಸೇರಿರುವ ಟಿಡಿಪಿ ನಾಯಕ ನಾರಾ ಲೋಕೇಶ್ , ತಮ್ಮ ಎಕ್ಸ್ ಖಾತೆಯಲ್ಲಿ 'ಲೂಟಿ' ತೋರಿಸುತ್ತಿರುವ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡಿದ್ದಾರೆ. ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ಭಕ್ತರು ಕಾಣಿಕೆಯಾಗಿ ಹುಂಡಿಗೆ ಹಾಕಿದ್ದ ಹಣವನ್ನು ಲೂಟಿ ಮಾಡಲಾಗಿದೆ ಎಂದು ರೆಡ್ಡಿ ಹೇಳಿದ್ದಾರೆ.

ಹೈಕೋರ್ಟ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದ್ದು, ಒಂದು ತಿಂಗಳೊಳಗೆ ತನಿಖೆ ಮತ್ತು ಮುಚ್ಚಿದ ಕವರ್ ವರದಿಯನ್ನು ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ರೆಡ್ಡಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ