ನವದೆಹಲಿ: ಪಾಕಿಸ್ತಾನ ನಾಗರಿಕ ಮತ್ತು ಮಿಲಿಟರಿ ವಿಮಾನಗಳಿಗೆ ತನ್ನ ವಾಯುಪ್ರದೇಶದ ನಿರ್ಬಂಧವನ್ನು ಭಾರತ ಅಕ್ಟೋಬರ್ 24 ರವರೆಗೆ ವಿಸ್ತರಿಸಿದೆ. ನೆರೆಯ ರಾಷ್ಟ್ರ ಪಾಕಿಸ್ತಾನ ಸಹ ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಅಕ್ಟೋಬರ್ 24 ರವರೆಗೆ ನಿರ್ಬಂಧಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಏಪ್ರಿಲ್‌ನಿಂದ ಎರಡೂ ದೇಶಗಳು ಪರಸ್ಪರ ವಿಮಾನಗಳಿಗೆ ತಮ್ಮ ವಾಯುಪ್ರದೇಶವನ್ನು ಬಂದ್ ಮಾಡಿವೆ. ವಾಯುಪ್ರದೇಶ ನಿರ್ಬಂಧವನ್ನು ವಿಸ್ತರಿಸಿದ್ದಕ್ಕಾಗಿ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ವಾಯುಪಡೆಯವರಿಗೆ(NOTAMs) ಪ್ರತ್ಯೇಕ ನೋಟಿಸ್‌ಗಳನ್ನು ನೀಡಿವೆ.
ಸೆಪ್ಟೆಂಬರ್ 23 ರಂದು ಹೊರಡಿಸಲಾದ ನೋಟಾಮ್ ಪ್ರಕಾರ, ಪಾಕಿಸ್ತಾನ ನೋಂದಾಯಿತ ವಿಮಾನಗಳು ಮತ್ತು ಪಾಕಿಸ್ತಾನ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ/ಮಾಲೀಕತ್ವದ ಅಥವಾ ಗುತ್ತಿಗೆ ಪಡೆದ ವಿಮಾನಗಳು, ಮಿಲಿಟರಿ ವಿಮಾನಗಳು ಸೇರಿದಂತೆ ಎಲ್ಲಾ ವಿಮಾನಗಳಿಗೆ ಭಾರತೀಯ ವಾಯುಪ್ರದೇಶವನ್ನು ನಿರ್ಬಂಧಿಸಲಾಗಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಏಪ್ರಿಲ್ 23 ರಂದು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಪಾಕಿಸ್ತಾನ ನಿರ್ಬಂಧಿಸಿತ್ತು.