ಶ್ರೀನಗರ: ಏಪ್ರಿಲ್ 22 ರ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆಸಿದ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲ ನೀಡಿದ ಆರೋಪದ ಮೇಲೆ ದಕ್ಷಿಣ ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಶ್ರೀನಗರ ಪೊಲೀಸರು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಓವರ್ ಗ್ರೌಂಡ್ ವರ್ಕರ್ ನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೊಹಮ್ಮದ್ ಯೂಸುಫ್ ಕಟಾರಿ(26) ಎಂದು ಗುರುತಿಸಲಾಗಿದೆ" ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರಿಗೆ ಲಾಜಿಸ್ಟಿಕ್ ಬೆಂಬಲ ನೀಡುವಲ್ಲಿ ಈತನ ಪಾತ್ರವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜುಲೈ 29 ರಂದು ನಡೆದ ಎನ್‌ಕೌಂಟರ್‌ನಲ್ಲಿ, ಭಾರತೀಯ ಸೇನೆಯ ಗಣ್ಯ ಪ್ಯಾರಾ ಕಮಾಂಡೋಗಳು ಶ್ರೀನಗರದ ಹೊರವಲಯದಲ್ಲಿ ಪಹಲ್ಗಾಮ್ ನಲ್ಲಿ ದಾಳಿ ನಡೆಸಿದ್ದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು.
ಹತ್ಯೆಯಾದ ಮೂವರು ಉಗ್ರರಲ್ಲಿ ಸುಲೈಮಾನ್ ಅಲಿಯಾಸ್ ಆಸಿಫ್ ಸೇರಿದ್ದು, ಈತ ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಎಂದು ನಂಬಲಾಗಿದೆ. ಉಳಿದ ಇಬ್ಬರನ್ನು ಜಿಬ್ರಾನ್ ಮತ್ತು ಹಮ್ಜಾ ಅಫ್ಘಾನಿ ಎಂದು ಗುರುತಿಸಲಾಗಿದೆ.