ಅಪಘಾತಗೊಂಡ ಥಾರ್ ಕಾರು 
ದೇಶ

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಐವರು ದುರ್ಮರಣ; ಸಂಪೂರ್ಣ ನಜ್ಜುಗುಜ್ಜಾದ ಥಾರ್ ಕಾರು!

ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಕೆಲಸದ ನಿಮಿತ್ತ ಉತ್ತರ ಪ್ರದೇಶದಿಂದ ಗುರುಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದೆ. ಮೃತರೆಲ್ಲರೂ ಉತ್ತರ ಪ್ರದೇಶದವರಾಗಿದ್ದಾರೆ.

ಚಂಡೀಗಢ: ವೇಗವಾಗಿ ಬಂದ ಥಾರ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

ಶನಿವಾರ ಮುಂಜಾನೆ 4:30ರ ಸುಮಾರಿಗೆ ಗುರುಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೂವರು ಪುರುಷರು ಹಾಗೂ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಆರು ಮಂದಿ ಕೆಲಸದ ನಿಮಿತ್ತ ಉತ್ತರ ಪ್ರದೇಶದಿಂದ ಗುರುಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆ ಅಪಘಾತ ಉಂಟಾಗಿದೆ. ಮೃತರೆಲ್ಲರೂ ಉತ್ತರ ಪ್ರದೇಶದವರಾಗಿದ್ದಾರೆ.

ಅತಿವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಥಾರ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇನ್ನೋರ್ವ ಗಾಯಾಳುವಿನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇ

ಮೃತರು ಮತ್ತು ಗಾಯಗೊಂಡವರನ್ನು ಇನ್ನೂ ಗುರುತಿಸಲಾಗಿಲ್ಲ. ಥಾರ್ ವಾಹನವು ಉತ್ತರ ಪ್ರದೇಶ ನೋಂದಣಿಯನ್ನು ಹೊಂದಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸೆಕ್ಟರ್ 40 ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಲಲಿತ್ ಕುಮಾರ್ ಹೇಳಿದರು. ಅಪಘಾತವು ಎಷ್ಟು ತೀವ್ರವಾಗಿತ್ತೆಂದರೆ ಥಾರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿತ್ತು ಮತ್ತು ಅವಶೇಷಗಳು ಸ್ಥಳದಲ್ಲಿ 50 ಮೀಟರ್‌ಗಿಂತಲೂ ಹೆಚ್ಚು ಹರಡಿಕೊಂಡಿದ್ದವು ಎಂದು ಮೂಲಗಳು ತಿಳಿಸಿವೆ. ಪೊಲೀಸರು ಸಂಪೂರ್ಣವಾಗಿ ನಜ್ಜುಗುಜ್ಜಾದ ವಾಹನವನ್ನು ಮುಖ್ಯ ರಸ್ತೆಯಿಂದ ತೆರವುಗೊಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜಧಾನಿ 'ಚಂಡೀಗಢ' ಕಸಿದುಕೊಳ್ಳಲು ಪಿತೂರಿ: ಕೇಂದ್ರದ ವಿರುದ್ಧ ಸಿಡಿದೆದ್ದ ಪಂಜಾಬ್! ಗಂಭೀರ ಪರಿಣಾಮದ ಎಚ್ಚರಿಕೆ

ರಾಜ್ಯದ ಜನತೆ ದಿನಬೆಳಗಾದರೆ ನೋಡಿ ಬೇಸತ್ತು ಹೋಗಿದ್ದಾರೆ, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರು ಎಂದು ಸ್ಪಷ್ಟಪಡಿಸಲಿ: ಆರ್ ಅಶೋಕ್

ಬೆಂಗಳೂರು ಎಟಿಎಂ ವ್ಯಾನ್ ದರೋಡೆ: ದರೋಡೆ ಹಿಂದಿನ ಅಸಲಿ ಕಾರಣ ಬಹಿರಂಗ! ಇಡೀ ಪ್ರಕರಣದ ಸೂತ್ರದಾರ ಯಾರು ಗೊತ್ತಾ?

ಮದುವೆ ಸಂಭ್ರಮದಲ್ಲಿ ಸ್ಮೃತಿ ಮಂಧಾನ: ಪಲಾಶ್ ಮುಚ್ಚಲ್ ಜೊತೆಗೆ ಮಸ್ತ್ ಡ್ಯಾನ್ಸ್! Video ವೈರಲ್

ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ- ಡಿಕೆ ಶಿವಕುಮಾರ್

SCROLL FOR NEXT