ಲೋಕಸಭಾ ಸಂಸದ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾನುವಾರ ಲಡಾಖ್‌ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳ ಕುರಿತು ಬಿಜೆಪಿ, ಆರ್‌ಎಸ್‌ಎಸ್ ಮತ್ತು ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡರು. ಪ್ರತಿಭಟನೆ ನಾಲ್ವರು ಜನರ ಸಾವಿಗೆ ಕಾರಣವಾಯಿತು. ಲಡಾಖ್ ಹಿಂಸಾಚಾರಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ರಾಹುಲ್ ಗಾಂಧಿ ದೂಷಿಸಿದ್ದಾರೆ. ಲಡಾಖ್‌ನ ಜನರು ಧ್ವನಿ ಎತ್ತಿದ್ದು ಅದನ್ನು ಬಿಜೆಪಿ ಧಮನಗೊಳಿಸಿದ್ದು ನಾಲ್ವರು ಯುವಕರ ಸಾವಿಗೆ ಕಾರಣವಾಗಿದ್ದು ಸೋನಮ್ ವಾಂಗ್‌ಚುಕ್ ಅನ್ನು ಜೈಲಿಗೆ ಹಾಕಿದೆ ಎಂದರು.
ಬಿಜೆಪಿ ಮತ್ತು ಆರ್‌ಎಸ್‌ಎಸ್ ಲಡಾಖ್‌ನ ಜನರು, ಸಂಸ್ಕೃತಿ ಮತ್ತು ಸಂಪ್ರದಾಯಗಳ ಮೇಲೆ ದಾಳಿ ಮಾಡುತ್ತಿವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದರು. ಲಡಾಖ್ ಅನ್ನು ಆರನೇ ಶೆಡ್ಯೂಲ್ ಗೆ ಸೇರಿಸಬೇಕೆಂದು ಅವರು ಪ್ರತಿಪಾದಿಸಿದರು. ಲೇಹ್‌ನಲ್ಲಿ ನಡೆದ ಹಿಂಸಾಚಾರದ ನಂತರ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.
ಬುಧವಾರ ಲೇಹ್‌ನಲ್ಲಿ ನಡೆದ ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ಅಂದಿನಿಂದ, ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ 50 ಜನರನ್ನು ಬಂಧಿಸಲಾಗಿದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿರುವ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದ್ದು ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ. ಆರನೇ ಶೆಡ್ಯೂಲ್ ಅಡಿಯಲ್ಲಿ ರಾಜ್ಯ ಸ್ಥಾನಮಾನ ಮತ್ತು ರಕ್ಷಣೆಯನ್ನು ಕೋರುವ ಪ್ರತಿಭಟನೆಗಳು ಹಿಂಸಾತ್ಮಕವಾಗಿ ತಿರುಗಿದ ಎರಡು ದಿನಗಳ ನಂತರ ಅವರನ್ನು ಬಂಧಿಸಲಾಯಿತು.
Xನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಬಿಜೆಪಿ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಲಡಾಖ್‌ನ ಅದ್ಭುತ ಜನರು, ಸಂಸ್ಕೃತಿ ಮತ್ತು ಸಂಪ್ರದಾಯಗಳ ಮೇಲೆ ದಾಳಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ, "ಲಡಾಖ್‌ನ ಜನರು ಧ್ವನಿ ಎತ್ತಿದರು. ಬಿಜೆಪಿ ನಾಲ್ವರು ಯುವಕರನ್ನು ಕೊಂದು ಸೋನಮ್ ವಾಂಗ್‌ಚುಕ್ ಅವರನ್ನು ಜೈಲಿಗೆ ಹಾಕುವ ಮೂಲಕ ಪ್ರತಿಕ್ರಿಯಿಸಿತು. ಹತ್ಯೆಯನ್ನು ನಿಲ್ಲಿಸಿ. ಹಿಂಸಾಚಾರವನ್ನು ನಿಲ್ಲಿಸಿ. ಬೆದರಿಕೆಗಳನ್ನು ನಿಲ್ಲಿಸಿ" ಎಂದು ಹೇಳಿದರು.