ಕರೂರು: ತಮಿಳುನಾಡಿನ ಕರೂರಿನಲ್ಲಿ ಶನಿವಾರ ತಮಿಳಿಗ ವೆಟ್ರಿ ಕಳಗಂ(TVK)ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳ ವಿರುದ್ಧ ಕೇಸ್ ದಾಖಲಾಗಿದೆ. ಆದರೆ ಪಕ್ಷದ ಅಧ್ಯಕ್ಷ ವಿಜಯ್ ಸದ್ಯಕ್ಕೆ ಬಚಾವ್ ಆಗಿದ್ದಾರೆ.
ಟಿವಿಕೆ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬುಸ್ಸಿ ಆನಂದ್, ರಾಜ್ಯ ಉಪ ಪ್ರಧಾನ ಕಾರ್ಯದರ್ಶಿ ಜಿಆರ್ ನಿರ್ಮಲ್ ಕುಮಾರ್, ಕರೂರು ಪಶ್ಚಿಮ ಜಿಲ್ಲಾ ಕಾರ್ಯದರ್ಶಿ ಮತಿಯಳಗನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಭಾರತೀಯ ನ್ಯಾಯ ಸಂಹಿತಾ(BNS) ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಕೇಸ್ ದಾಖಲಾಗಿದೆ.
ನಟ ವಿಜಯ್ ಅವರು ಕರೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಿಂದ 41 ಜನರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.