ನವದೆಹಲಿ: ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಗೆದ್ದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಾಕಿಸ್ತಾನದ ಕಾಲೆಳೆದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಮೋದಿಯವರು, ಭಾರತದ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಇದೇ ವೇಳೆ ಪಾಕಿಸ್ತಾನದ ಕಾಲೆಳೆದಿದ್ದಾರೆ.
ಕ್ರೀಡಾ ಮೈದಾನದಲ್ಲೂ ಆಪರೇಷನ್ ಸಿಂಧೂರ. ಫಲಿತಾಂಶ ಒಂದೇ - ಭಾರತ ಗೆದ್ದಿದೆ. ನಮ್ಮ ಕ್ರಿಕೆಟಿಗರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ವಿರುದ್ಧವಾಗಿ ಭಾರತ ಸೇನೆ ಪಾಕಿಸ್ತಾನದಲ್ಲಿದ್ದ ಉಗ್ರರ ಹಡಗುತಾಣಗಳ ಮೇಲೆ ದಾಳಿಗೆ ಉಗ್ರನೆಲೆಗಳನ್ನ ಧ್ವಂಸ ಮಾಡಿತ್ತು. ಇದಕ್ಕೆ ಭಾರತ ಸರ್ಕಾರ ಆಫರೇಷನ್ ಸಿಂಧೂರ ಎಂದು ಹೆಸರಿಟ್ಟಿತ್ತು. ಈ ದಾಳಿಯ ವೇಳೆ ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳನ್ನ ಭಾರತ ವಾಯು ಸೇನ್ ಧ್ವಂಸಗೊಳಿಸಿತ್ತು.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಜೈಶ್-ಎ-ಮೊಹಮ್ಮದ್ (JeM) ಮತ್ತು ಲಷ್ಕರ್-ಎ-ತೈಬಾ (LeT) ನಂತಹ ಉಗ್ರ ಸಂಘಟನೆಗಳ 9 ತರಬೇತಿ ಶಿಬಿರಗಳನ್ನು ನಾಶಪಡಿಸಲಾಗಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ದಾಳಿ ನಡೆಸಿತ್ತು. ಇದಕ್ಖೂ ಪ್ರತಿಕ್ರಿಯೆ ನೀಡಿದ್ದ ಭಾರತೀಯ ಸೇನೆ ಹಲವು ಪಾಕಿಸ್ತಾನದ ವಾಯುನೆಲೆಗಳನ್ನ ಧ್ವಂಸ ಮಾಡಿತ್ತು.