ಗಾಜಾ ಸಂಘರ್ಷವನ್ನು ಕೊನೆಗೊಳಿಸುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಜನರಿಗೆ ಹಾಗೂ ಪಶ್ಚಿಮ ಏಷ್ಯಾ ಪ್ರದೇಶಕ್ಕೆ ದೀರ್ಘಾವಧಿಯ ಶಾಂತಿ, ಭದ್ರತೆ ಮತ್ತು ಅಭಿವೃದ್ಧಿಗೆ ಇದು ಕಾರ್ಯಸಾಧ್ಯವಾದ ಮಾರ್ಗವನ್ನು ಒದಗಿಸುತ್ತದೆ ಎಂದು ಹೇಳಿದ್ದಾರೆ.
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಟ್ರಂಪ್ 20 ಅಂಶಗಳ ಯೋಜನೆಯನ್ನು ಘೋಷಿಸಿದ ನಂತರ ಎಕ್ಸ್ ಪೋಸ್ಟ್‌ನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, ಸಂಘರ್ಷ ಕೊನೆಗೊಳಿಸಲು ಮತ್ತು ಶಾಂತಿಯನ್ನು ಭದ್ರಪಡಿಸಿಕೊಳ್ಳಲು ಅಧ್ಯಕ್ಷ ಟ್ರಂಪ್ ಅವರ ಈ ಪ್ರಯತ್ನಕ್ಕೆ ಸಂಬಂಧಪಟ್ಟವರೆಲ್ಲರೂ ಒಗ್ಗೂಡುತ್ತೇವೆ ಎಂದಿದ್ದಾರೆ.
ಗಾಜಾದಲ್ಲಿ ಯುದ್ಧವನ್ನು ಕೊನೆಗೊಳಿಸುವ ಯೋಜನೆಯ ಬಗ್ಗೆ ಒಪ್ಪಂದಕ್ಕೆ ಬಂದಿದ್ದೇವೆ ಎಂದು ಟ್ರಂಪ್ ಹೇಳಿದ್ದರು. ಆದರೆ ಹಮಾಸ್ ಈ ಷರತ್ತುಗಳನ್ನು ಸ್ವೀಕರಿಸುತ್ತದೆಯೇ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್-ಹಮಾಸ್ ಯುದ್ಧವನ್ನು ಕೊನೆಗೊಳಿಸಲು ಮತ್ತು ಯುದ್ಧ ಪೀಡಿತ ಪ್ಯಾಲೆಸ್ತೀನ್ ಪ್ರದೇಶದಲ್ಲಿ ತಾತ್ಕಾಲಿಕ ಆಡಳಿತ ಮಂಡಳಿಯನ್ನು ಸ್ಥಾಪಿಸಲು ಟ್ರಂಪ್ 20 ಅಂಶಗಳ ಯೋಜನೆಯನ್ನು ರೂಪಿಸಿದ್ದರು. ಮಾಜಿ ಬ್ರಿಟಿಷ್ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಒಳಗೊಂಡಿದ್ದು ಟ್ರಂಪ್ ನೇತೃತ್ವ ವಹಿಸುತ್ತಾರೆ.